ಬೆಂಗಳೂರು –
ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದ ಕಚೇರಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು.ಕಚೇರಿಗೆ ಆಗಮಿಸಿದ ಇವರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡರು.
ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಬಿಜೆಪಿ ಕಚೇರಿಯಲ್ಲಿನ ಭಾರತ ಮಾತೆಯ ಭಾವಚಿತ್ರ ಹಾಗೂ ಜಗನ್ನಾಥರಾವ್ ಜೋಶಿ ಅವರ ಪುತ್ಥಳಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಿಹಿ ತಿನ್ನಿಸಿ ಶುಭ ಕೋರಿದರು.