ಬೆಂಗಳೂರು –
ಸರ್ಕಾರಿ ನೌಕರರು ವರ್ಗಾವಣೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ರಾಜಕೀಯ ಪ್ರಭಾವ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂತಹವರ ವಿರುದ್ಧ ಕಠಿಣ ಕ್ರಮ ವಹಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜುಲೈ ತಿಂಗಳಿನಲ್ಲಿ ಪೂರ್ಣಗೊಳಿಸಲಾಗಿದೆ. ಮೊದಲು 15 ದಿನದಲ್ಲಿ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿತ್ತು. ಬಳಿಕ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು ಈಗ ಇದೇ ವಿಚಾರದಲ್ಲಿ ಮುಖ್ಯ ಮಂತ್ರಿಗಳು ಟಿಪ್ಪಣಿಯೊಂದನ್ನು ಹೊರಡಿಸಿದ್ದಾರೆ
ಸದ್ಯ ಈ ಒಂದು ಕುರಿತು ನಡವಳಿ ಪತ್ರವನ್ನು ಬರೆದಿದ್ದಾರೆ ಆದರೆ ತೆರೆ ಮರೆಯಲ್ಲಿ ವರ್ಷವಿಡಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಲೆ ಇರುತ್ತವೆ ಎಂಬೊದಕ್ಕೆ ಪ್ರತಿದಿನ ಹೊರಬರುತ್ತಿರುವ ವರ್ಗಾವಣೆ ಆದೇಶಗಳೇ ಸಾಕ್ಷಿ ಯಾಗಿದ್ದು ಇದಕ್ಕೆ ಮುಖ್ಯಮಂತ್ರಿ ಯವರು ಏನು ಹೇಳ್ತಾರೆ ಎಂಬೊಂದು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..