ರಾಜ್ಯದ ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ ನೀಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಸ್ಟ್ 13 ರಿಂದ ತಪ್ಪದೆ ಈ ಒಂದು ಕೆಲಸ ಮಾಡಲು ಸೂಚನೆ

Suddi Sante Desk

ಬೆಂಗಳೂರು –

ರಾಜ್ಯದ ಸರ್ಕಾರಿ ನೌಕರರು ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿ ಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ

ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಅವರು ಬಣ್ಣಿಸಿದ್ದಾರೆ

ರಾಷ್ಟ್ರದೆಲ್ಲೆಡೆಯಂತೆ,ರಾಜ್ಯದಲ್ಲಿಯೂ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ ಎಂದರು

ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆ ಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ಇಡೀ ರಾಷ್ಟ್ರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.ಅದರಂತೆ ಈ ಅಭಿಯಾನಕ್ಕೆ ಕರ್ನಾಟದಲ್ಲೂ ಪೂರ್ಣ ಪ್ರಮಾಣದ ಸ್ಪಂದನೆ ದೊರೆ ಯಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.