ರಾಜ್ಯದ ಸಂಸದರೊಂದಿಗೆ ಸಭೆ ಮಾಡಿದ CM,DCM, – ದೆಹಲಿಯಲ್ಲಿ ನಡೆಯಿತು ಮಹತ್ವದ ಸಭೆ…..ರಾಜ್ಯದ ಸಮಸ್ಯೆಗಳ ಕುರಿತು ಧ್ವನಿ ಎತ್ತಲು ಕರೆ…..

Suddi Sante Desk
ರಾಜ್ಯದ ಸಂಸದರೊಂದಿಗೆ ಸಭೆ ಮಾಡಿದ CM,DCM, – ದೆಹಲಿಯಲ್ಲಿ ನಡೆಯಿತು ಮಹತ್ವದ ಸಭೆ…..ರಾಜ್ಯದ ಸಮಸ್ಯೆಗಳ ಕುರಿತು ಧ್ವನಿ ಎತ್ತಲು ಕರೆ…..

ನವದೆಹಲಿ

ರಾಜ್ಯದ ನೂತನ ಸಂಸದರೊಂದಿಗೆ ಮುಖ್ಯಮಂತ್ರಿ ಮತ್ತು  ಉಪ ಮುಖ್ಯಮಂತ್ರಿ ಡಿಕೆಶಿ ಸೇರಿದಂತೆ ಹಲವು ನಾಯಕರು ಸಭೆ ಮಾಡಿದರು ಹೌದು ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸ ಲಾಗಿದ್ದ ರಾಜ್ಯ ದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪಾಲ್ಗೊಂಡು ಹಲವಾರು ವಿಚಾರ ಗಳ ಕುರಿತು ಚರ್ಚೆ ಯನ್ನು ಮಾಡಲಾಯಿತು

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿ ಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂಬ ಸಂದೇಶ ವನ್ನು ನೀಡಲಾಯಿತು

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ.ಆ ಹಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಿಸಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಲಾಯಿತು

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ.ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ ಎಂಬ ಮಾತುಗಳು ಕೂಡಾ ಸಭೆಯಲ್ಲಿ ಕೇಳಿ ಬಂದವು

18,172 ಕೋಟಿ ರೂ. ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ ಇದಕ್ಕಾಗಿ ನಿಮ್ಮೆಲ್ಲರ ಪ್ರಯತ್ನ ಅಗತ್ಯವಿದೆ.ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನ ಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ತಾವು ಪ್ರಯತ್ನಿಸಬೇಕು

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳು ತ್ತದೆ ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿ ದ್ದೇವೆ ಇದು ಈಡೇರಿಸಬೇಕಾಗಿದೆ ಎಂಬ ಸಂದೇಶ ವನ್ನು ಮುಖ್ಯಮಂತ್ರಿ ಸೇರಿದಂತೆ ಎಲ್ಲರಿಂದಲೂ ಕೇಳಿ ಬಂದಿತು

ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮ‌ಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು.ರಾಜ್ಯ ರೈಲ್ವೇ ಸಂಪರ್ಕ ದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಲ್ಲಿ ಮನವಿ ಮಾಡುತ್ತೇನೆ ಎಂದು ರಾಜ್ಯದ ನಾಯಕರು ಹೇಳಿದರು

ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ.15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯ ವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕಾಗಿದೆ.

ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ.1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ.

15ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತ ವನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ.ಇನ್‌ಪುಟ್ ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ.

ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ. ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ತಾವೆಲ್ಲರೂ ಪಕ್ಷಬೇಧ ಮರೆತು ಧ್ವನಿ ಎತ್ತಬೇಕಾಗಿ ಮನವಿಯನ್ನು ರಾಜ್ಯದ ಪರವಾಗಿ ಮಾಡಲಾ ಯಿತು.

ಸುದ್ದಿ ಸಂತೆ ನ್ಯೂಸ್ ನವದೆಹಲಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.