ಹಾವೇರಿ –
ರಷ್ಯಾ ದಾಳಿಯಲ್ಲಿ ಉಕ್ರೇನ್ ನಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ.ಹೌದು ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯ ವಾಗಿದೆ.ಮೃತ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂದು ಗುರುತಿಸಲಾಗಿದೆ.

ಭಾರತದ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿರುವ ಮಾಹಿತಿಯನ್ನು ಉಕ್ರೇನ್ನ ವಿಧಿವಿಜ್ಞಾನ ತಜ್ಞರು ಖಚಿತಪಡಿ ಸಿದ್ದಾರೆ.ಇನ್ನು ಈ ಕುರಿತು ಟ್ವೀಟ್ ಮಾಡಿರುವ ವಿದೇ ಶಾಂಗ ಇಲಾಖೆ ಭಾರತೀಯ ವಿದ್ಯಾರ್ಥಿಯೊರ್ವ ಖಾರ್ಕೀ ವ್‌ನಲ್ಲಿ ಸಾವನ್ನಪ್ಪಿದ್ದಾರೆ.

ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು ವಿದ್ಯಾರ್ಥಿ ನಿಧನಕ್ಕೆ ಸಚಿವಾಲಯ ಸಂತಾಪ ಸೂಚಿಸಿದೆ. ಇನ್ನೂ ಉತ್ತ ಹುಟ್ಟೂರಿನಲ್ಲಿ ವಿದ್ಯಾರ್ಥಿಯ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ