ಗದಗ –
ಮಂಗಳೂರು-ವಿಜಯಪುರ ರೈಲಿನಲ್ಲಿ ಪ್ರಯಾಣಿ ಸುತ್ತಿದ್ದ ಶಿಕ್ಷಕ ರಾಮಚಂದ್ರ ಢಗೆ (40) ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಗದಗ ನಲ್ಲಿ ನಡೆದಿದೆ ಬಾಗಲ ಕೋಟೆ ನವನಗರ ನಿವಾಸಿಯಾದ ರಾಮಚಂದ್ರ ಅವರು ಮೈಸೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸಂಗೀತ ಶಿಕ್ಷರಾಗಿದ್ದರು.
ಮಂಗಳೂರು- ವಿಜಯಪುರ ರೈಲಿನಲ್ಲಿ ಪ್ರಯಾಣಿ ಸುತ್ತಿದ್ದ ಸಂದರ್ಭದಲ್ಲಿ ಹೊಂಬಳ ರೈಲು ನಿಲ್ದಾಣದ ಬಳಿ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದಾರೆ. ಚಲಿಸುವ ರೈಲಿಗೆ ಕಾಲುಗಳು ಸಿಕ್ಕಿಹಾಕಿಕೊಂಡಿದ್ದರಿಂದ ಕಾಲುಗಳು ತುಂಡಾಗಿವೆ.ತೀವ್ರ ರಕ್ತಸ್ತಾವ ಆಗುತ್ತಿದ್ದ ಅವರನ್ನು ಗದಗ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿ ದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ’ ಎಂದು ಗದಗ ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಗದಗ…..