ಬೆಂಗಳೂರು –
ಡಿಸೆಂಬರ್ 31 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ – ಬೇಡಿಕೆ ಈಡೇರಿಸದಿದ್ದರೆ ನಡೆಯಲಿದೆ ನೌಕರರ ಮುಷ್ಕರ…..ಹೋರಾಟಕ್ಕೆ ಸಿದ್ದರಾಗುವಂತೆ ಕರೆ…..
ಮತ್ತೊಂದು ಹೋರಾಟಕ್ಕೆ ಸಾರಿಗೆ ನೌಕರರು ಸಿದ್ದ ರಾಗುವಂತಹ ಲಕ್ಷಣಗಳು ಕಂಡು ಬರುತ್ತಿವೆ.ಹೌದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಹಿಂದೆ ನೌಕರರು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದರು ಇದರ ನಡುವೆಯೂ ಕೂಡಾ ಬೆಳಗಾವಿಯ ಅಧಿವೇಶದ ಆರಂಭದಲ್ಲೂ ಕೂಡಾ ಪ್ರತಿಭಟನೆ ಮಾಡಿ ಗಮನವನ್ನು ಸೆಳೆದಿದ್ದರು
ಸ್ಪಂದಿಸದ ಹಿನ್ನಲೆಯಲ್ಲಿ ಸಧ್ಯ ಡಿಸೆಂಬರ್ 31 ರಿಂದ ಸಾರಿಗೆ ನೌಕರರು ದೊಡ್ಡ ಪ್ರಮಾಣದ ಹೋರಾಟಕ್ಕೆ ಕರೆ ನೀಡಿದ್ದಾರೆ.ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರವನ್ನು ಮಾಡಿ ದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸಲಿದ್ದಾರೆ.
ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಮುನ್ನಾದಿನದಂದು ಲಕ್ಷಾಂತರ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ.ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗಳು ಈಡೇರದಿದ್ದರೆ ಮುಷ್ಕರ ನಡೆಸುವುದಾಗಿ ಸಾರಿಗೆ ನೌಕರರ ಎಚ್ಚರಿಕೆ ನೀಡಿದ್ದು 36 ತಿಂಗಳಿಂದ ಬಾಕಿ ಉಳಿದಿರುವ 1,750 ಕೋಟಿ ರೂ.ಗಳ ಬಾಕಿ ಪಾವತಿ ಬಿಡುಗಡೆ ಮಾಡಬೇಕು.
ಮೂಲವೇತನಕ್ಕೆ ಶೇಕಡ 25 ರಷ್ಟು ವೇತನ ಹೆಚ್ಚಿಸಿ, ಶೇಕಡ 31 ರಷ್ಟು ತುಟ್ಟಿ ಭತ್ಯೆ ವಿಲೀನಗೊಳಿಸಿ ವೇತನ ಶ್ರೇಣಿ ಸಿದ್ಧಪಡಿಸಬೇಕು. ನೌಕರರ ಭತ್ಯೆಗಳನ್ನು ಶೇ.5 ಪಟ್ಟು ಹೆಚ್ಚಳ ಮಾಡಬೇಕು. ಪ್ರತಿ ತಿಂಗಳು 2000 ರೂ. ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಬೇಕು. ಬಸ್ ನಿಲ್ದಾಣ ಮತ್ತು ಬಸ್ ಘಟಕಗಳಲ್ಲಿ ಸೂಕ್ತ ಶೌಚಾಲಯ, ಕುಡಿ ಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶಕ್ತಿ ಯೋಜನೆ ಯಿಂದ ಆಗುತ್ತಿರುವ ಶಿಕ್ಷೆ, ಕಿರುಕುಳ ಸಮಸ್ಯೆ ಪರಿಹರಿ ಸಬೇಕು.
ನೌಕರರ ಮುಂಬಡ್ತಿಗೆ ಕ್ರಮ ಕೈಗೊಳ್ಳಬೇಕು. ಹೆಚ್ಚುವರಿ ಕೆಲಸದ ಅವಧಿಗೆ ಓಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ನೌಕರರು ಪಟ್ಟು ಹಿಡಿದಿದ್ದು ಏನೇನಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..