ಬೆಂಗಳೂರು –
2022-23ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಸಹ -ಪಠ್ಯಚಟುವಟಿಕೆ ಗಳ ಸ್ಪರ್ಧೆಗಾಗಿ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ.ಹೌದು ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿ ಸಿದ್ದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2022-23ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ ಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಹ-ಪಠ್ಯ ಚಟುವಟಿಕೆಗಾಗಿ ಆಯೋಜನ ವೆಚ್ಚವನ್ನು ಕೂಡ ಬಿಡುಗಡೆ ಮಾಡಲಾಗಿದೆ. ಸ್ಪರ್ಧೆಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಈ ಕೆಳಗಿನ ವೇಳಾಪಟ್ಟಿಯಂತೆ ನಡೆಸಲು ನಿಗದಿ ಪಡಿಸಲಾಗಿದೆ ವಿಜೇತರಾದ ಶಿಕ್ಷಕರಿಗೆ ಪ್ರತ್ಯೇಕ ಪ್ರಶಸ್ತಿ ಪತ್ರಗಳನ್ನು, ನಗದು ಬಹುಮಾನವನ್ನು ವಿತರಿಸಲಾಗುವುದು ಎಂದಿದ್ದಾರೆ.
ಹೀಗೆದೆ 2022-23ನೇ ಸಾಲಿನಲ್ಲಿ ನಡೆಯುವ ಸಹ-ಪಠ್ಯ ಚಟುವಟಿಕೆ ಸ್ಪರ್ಧೆಗಳ ವೇಳಾಪಟ್ಟಿ
ದಿನಾಂಕ 15-11-2022ರಂದು ತಾಲೂಕು ಮಟ್ಟದ ಸ್ಪರ್ಧೆ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಆಯೋಜಿಸಲಿದ್ದಾರೆ.ವಿಜೇತರ ಪಟ್ಟಿಯನ್ನು ದಿನಾಂಕ 22-11-2022ರೊಳಗೆ ಜಿಲ್ಲಾ ಉಪ ನಿರ್ದೇಶಕರಿಗೆ ಕಳುಹಿಸಲು ಸೂಚಿಸಲಾಗಿದೆ.
ದಿನಾಂಕ 29-11-2022ರಂದು ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರು ಆಯೋಜಿಸಲಿದ್ದಾರೆ.ಈ ಸ್ಪರ್ಧೆಯಲ್ಲಿ ವಿಜೇತರ ಪಟ್ಟಿಯನ್ನು ನಿಧಿಗಳ ಕಚೇರಿಗೆ ಕಳುಹಿಸಲು ಅಂತಿಮ ದಿನಾಂಕ 06-12-2022 ಆಗಿದೆ.
ರಾಜ್ಯ ಮಟ್ಟದ ಸ್ಪರ್ಧೆಗಳ ದಿನಾಂಕವನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದ ಸ್ಪರ್ಧೆಯ ಬಳಿಕ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ಈ ಸಹ ಪಠ್ಯ ಚಟುವಟಿಕೆಯಲ್ಲಿ ಪ್ರಾಥಮಿಕ,ಪ್ರೌಢ ಶಾಲೆಯ ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರವೇ ಭಾಗವಹಿಸಲು ಅವಕಾಶವಿದೆ.ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ. ವಿಜೇತ ಶಿಕ್ಷಕರಿಗೆ ನಗದು ಬಹುಮಾನವಾಗಿ ಪ್ರಥಮ ರೂ.5000, ದ್ವಿತೀಯ ರೂ.3000 ಹಾಗೂ ತೃತೀಯ ಬಹುಮಾನ ರೂ.2000 ( ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಸೇರಿ 14 ಸ್ಪರ್ಧೆಗಳಿಗೆ ರೂ.10,000ದಂತೆ) ನೀಡಲಾಗುತ್ತದೆ