ಬೆಂಗಳೂರು –
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.ಹೌ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿ.ಪಿ.ಇಡಿ. ಪದವಿ ಪಡೆದ ದೈಹಿಕ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು ರಾಜ್ಯಾದ್ಯಂತ ಹಲವಾರು ಪ್ರೌಢಶಾಲಾ ದೈಹಿಕ ಶಿಕ್ಷಕರ ಗ್ರೇಡ್-1 ಹುದ್ದೆಗಳು ಖಾಲಿ ಇದ್ದು, ಆದ್ದರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಬಿ.ಪಿ.ಎಡ್. ಪದವಿ ಪಡೆದ ದೈಹಿಕ ಶಿಕ್ಷಕರಿಗೆ ಸರ್ಕಾರದ ನಿಯಮಾನುಸಾರ ಪ್ರೌಢಶಾಲಾ ದೈಹಿಕ ಶಿಕ್ಷಕರೆಂದು ಗ್ರೇಡ್-1 ಹುದ್ದೆಗಳಿಗೆ ಬಡ್ತಿ ನೀಡುವಂತೆ ಕೋರಿದ್ದರು
ಉಲ್ಲೇಖಿತ-(1)ರ ಜ್ಞಾಪನ ಪತ್ರದಲ್ಲಿ ಈಗಾಗಲೇ ಬಿ.ಪಿ.ಎಡ್, ವಿದ್ಯಾರ್ಹತೆ ಹೊಂದಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಬಡ್ತಿ ನೀಡಲು ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮ ಗಳನ್ನು ಪರಿಶೀಲಿಸಿ ಮುಂಬಡ್ತಿ ನೀಡಲು ಅಗತ್ಯ ಕ್ರಮವಹಿಸಲು ಸೂಚಿಸಲಾಗಿರುತ್ತದೆ.
ಉಲ್ಲೇಖಿತ-(2)ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ರವರು ಕೋರಿರುವಂತೆ ಉಲ್ಲೇಖ-(1)ರ ಪತ್ರದಲ್ಲಿ ಈಗಾಗಲೇ ಸೂಚಿಸಿರುವಂತೆ ಕೂಡಲೇ ಕ್ರಮವಹಿಸಿ ಹಾಗೂ ಕೈಗೊಂಡ ಕ್ರಮದ ಬಗ್ಗೆ ತುರ್ತಾಗಿ ವರದಿ ಸಲ್ಲಿಸಲು ಮರು ಆದೇಶಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



