This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಸರ್ಕಾರಿ ಶಾಲೆಯಲ್ಲಿ ಇ‌ನ್ನೂ ಮುಂದೆ ವಾರದಲ್ಲಿ ಎರಡು ದಿನ ಸ್ಪೋಕನ್ ಇಂಗ್ಲೀಷ್ ನೂತನ ನಿರ್ಧಾರ ಕೈಗೊಂಡ ಇಲಾಖೆ…..

WhatsApp Group Join Now
Telegram Group Join Now

ಬೆಂಗಳೂರು –

ಖಾಸಗಿ ಶಾಲಾ ಮಕ್ಕಳಂತೆಯೇ ಸರ್ಕಾರಿ ಶಾಲಾ ಮಕ್ಕಳು ಕೂಡ ಗುಣಮಟ್ಟದ ಕಲಿಕೆಯತ್ತ ಸಾಗಲಿ ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ನೂತನವಾದ ನಿರ್ಧಾರವನ್ನು ಕೈಗೊಂಡಿದೆ.ಹೌದು ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದು ಇದಕ್ಕೆ ಸರ್ಕಾರ ಸಾಕಷ್ಟು ಸಿದ್ದತೆ ಗಳನ್ನು ಮಾಡಿಕೊಳ್ಳುತ್ತಿದೆ.

ಪ್ರಸಕ್ತ ಸಾಲಿನಿಂದಲೇ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭ ಮಾಡಲು ಮುಂದಾಗಿದೆ.ಇದಕ್ಕೆ ಸರ್ಕಾರಿ ಶಾಲೆ ಗಳನ್ನು ಆಯ್ಕೆ ಮಾಡಿ ಮೈಸೂರಿನ ಇರೋ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸಂಸ್ಥೆಯಲ್ಲಿ ವಿಶೇಷ ತರಬೇತಿ ನೀಡಲಾಗುತ್ತದೆ.

ತರಬೇತಿ ಪಡೆದ ಶಿಕ್ಷಕರು ಮಕ್ಕಳಿಗೆ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿ ಕೊಡುತ್ತಾರೆ ಎಂದು ತಿಳಿದು ಬಂದಿದ್ದು ಒಂದು ವೇಳೆ ಶಿಕ್ಷಕರ ಕೊರತೆ ಕಂಡು ಬಂದರೆ ಔಟ್ ಸೋರ್ಸ್ ಅಥವಾ ಅತಿಥಿ ಶಿಕ್ಷಕರನ್ನ ನೇಮಕ ಮಾಡಿ ಕೊಂಡು ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ಮುಂ ದಾಗುವತ್ತ ಹೆಜ್ಜೆ ಇಟ್ಟಿದೆ.1 ರಿಂದ 6 ಅಥವಾ 1-8 ನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಬೇತಿ ನೀಡುವ ಪ್ಲ್ಯಾನ್ ಶಿಕ್ಷಣ ಇಲಾಖೆ ಮಾಡಿಕೊಂಡಿದೆ.ವಾರದಲ್ಲಿ ಒಂದು ದಿನ ಶನಿವಾರ ಅಥವಾ ವಾರದಲ್ಲಿ ಎರಡು ದಿನ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ವೇಳಾ ಪಟ್ಟಿ ರೆಡಿ ಮಾಡಿಕೊಂಡಿದೆ.ಇದಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಯ ಜೊತೆ ಸಭೆ ನಂತರ ಅಧಿಕೃತ ಆದೇಶ ಹೊರಡಿ ಸುವುದು ಬಾಕಿ ಇದೆ.


Google News

 

 

WhatsApp Group Join Now
Telegram Group Join Now
Suddi Sante Desk