ಧಾರವಾಡ –
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ವೊಂದು ಬಿ.ಆರ್.ಟಿ.ಎಸ್. ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಘಟನೆ ಧಾರವಾಡದಲ್ಲಿ ನಡೆದಿದೆ.
ನಗರದ ಟೋಲ್‌ನಾಕಾ ಬಳಿ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್ ಬಿ.ಅರ್.ಟಿ.ಎಸ್. ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದೆ
ಪರಿಣಾಮ ಸುಮಾರು 30 ಅಡಿ ಬ್ಯಾರಿಕೇಡ್ ಕಿತ್ತಿಕೊಂಡು ಹೋಗಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ.
ಸ್ಥಳಕ್ಕೆ ಆಗಮಿಸಿದ ಸಂಚಾರ ಠಾಣೆ ಪೊಲೀಸರು, ಬಸ್‌ನ್ನು ಹೊರಗೆ ತೆಗೆದು ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದ್ದಾರೆ.