ಧಾರವಾಡ – ಚಲಿಸುತ್ತಿದ್ದ ಬೊಲೆರೋ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಬೆಂಕಿ ಕಾಣಿಕೊಳ್ಳುತ್ತಿದ್ದಂತೆ ಚಾಲಕ ಸೇರಿದಂತೆ ವಾಹನ ಸವಾರರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿರುವ ಘಟನೆ ಧಾರವಾಡದ ರಾಯಪುರ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಧಾರವಾಡಕ್ಕೆ ಈ ವಾಹನ ಬರುತ್ತಿತ್ತು. ರಾಯಾಪುರ ಬರುತ್ತಿದ್ದಂತೆಯೇ ಬೊಲೆರೋ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.
ಇನ್ನೂ ಚಾಲಕನ ಬೆಂಕಿ ನಂದಿಸುವ ಕಾರ್ಯಕ್ಕೆ ಸ್ಥಳಿಯ ವಾಹನ ಸವಾರರು ನೇರವಾಗಿದ್ದಾರೆ ಅಲ್ಲದೇ, ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳಿಯರು ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಘಟನೆ ಧಾರವಾಡ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲಾ.