ಬೆಂಗಳೂರು –
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಯು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು ರೋಗಲಕ್ಷಣಗ ಳನ್ನು ಹೊಂದಿರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗ ಳಿಗೆ ಸಲಹೆ ನೀಡಿದೆ.ಹೌದು ಕಳೆದ ಕೆಲವು ದಿನಗಳಲ್ಲಿ ಕೋವಿಡ್ -19 ಪಾಸಿಟಿವ್ ಬರುವ ಮಕ್ಕಳ ಸಂಖ್ಯೆ ಹೆಚ್ಚಾದ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ಗಳು ಖಾಸಗಿ ಶಾಲೆಗಳ ಪ್ರತಿನಿಧಿಗಳು ಮತ್ತು ಬಿಬಿಎಂಪಿ ಯೊಂದಿಗೆ ಸಭೆ ನಡೆಸಿದ್ದಾರೆ.ರೋಗ ಲಕ್ಷಣಗಳನ್ನು ಹೊಂದಿರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸಲಹೆ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್ ಮಾತನಾಡಿ ಕೋವಿಡ್ -19 ಗಾಗಿ ಪ್ರಮಾಣಿತ ಕಾರ್ಯಾ ಚರಣಾ ವಿಧಾನವನ್ನು ಅನುಸರಿಸಲು ನಾವು ಶಾಲೆಗಳಿಗೆ ಸೂಚನೆ ನೀಡಿದ್ದೇವೆ.ನೆಗಡಿ,ಕೆಮ್ಮು,ಜ್ವರ ಮುಂತಾದ ರೋಗಲಕ್ಷಣಗಳನ್ನು ಹೊಂದಿದ್ದರೆ ಮಕ್ಕಳನ್ನು ಮನೆಗೆ ಕಳುಹಿಸುವಂತೆ ನಾವು ಶಾಲೆಗಳಿಗೆ ಸೂಚನೆ ನೀಡಿದ್ದೇವೆ ಎಂದರು.ಮಕ್ಕಳು ಮತ್ತು ಸಿಬ್ಬಂದಿ ಇಬ್ಬರಿಗೂ ಲಸಿಕೆ ಮತ್ತು ಬೂಸ್ಟರ್ ಡೋಸ್ ಗಳನ್ನು ಖಚಿತಪಡಿಸಿಕೊಳ್ಳಲು ಆಯು ಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.