ಬೆಂಗಳೂರು –
ರಾಜ್ಯದ ಎಲ್ಲಾ ಶಾಲೆಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ – ಈ ಕೂಡಲೇ ಕೆಲಸವನ್ನು ಮಾಡಿ ವರದಿ ನೀಡುವಂತೆ ಬಿಇಓ ಗಳಿಗೆ ಸೂಚನೆ ನೀಡಿದ ಆಯುಕ್ತರು
ಹೌದು ಶಾಲಾ ವಾಹನಗಳಲ್ಲಿ ಕಾರ್ಯನಿರ್ವ ಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಮಾಡಿಸುವ ಬಗ್ಗೆ ಸೂಚನೆಯನ್ನು ನೀಡಿದೆ ಹೌದು ಈ ಒಂದು ಕುರಿತಂತೆ ಇಲಾಖೆಯ ಆಯುಕ್ತೆ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಸರ್ಕಾರದ ಪತ್ರ ದಿನಾಂಕ 04/06/2023 ಕಛೇರಿ ಸುತ್ತೋಲೆ 26/07/2019 ಉಲ್ಲೇಖ ಮಾಡಿದ್ದು ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಮಾಡಿಸುವ ಬಗ್ಗೆ ಕ್ರಮವಹಿಸಲು ತಿಳಿಸಲಾಗಿದೆ. ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1999ಕ್ಕೆ ತಿದ್ದುಪಡಿ ತಂದು ಖಾಸಗಿ ಒಪ್ಪಂದ ವಾಹನಗ ಳಲ್ಲಿ
ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಲುವಾಗಿ ಅಧಿಸೂಚನೆಯನ್ನು ಹೊರಡಿಸಲಾಗಿ ರುತ್ತದೆ ಎಂದು ತಿಳಿಸಿದ್ದಾರೆ.ಕರ್ನಾಟಕ ಮೋಟಾ ರು ವಾಹನಗಳ ನಿಯಮಗಳು 1989 ನಿಯಮ ದಂತ ‘ಸ್ಕೂಲ್ ಕ್ಯಾಬ್ ಸೇಫ್ಟಿ ಕಮಿಟಿ ರಚಿಸಲು ಕಛೇರಿಯಿಂದ ಸುತ್ತೋಲೆಯನ್ನು ಹೊರಡಿಸಿರು ವುದನ್ನು ಉಲ್ಲೇಖಿಸಿ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಮತ್ತು ವಾಹನ ಗಳ
ಸಹಾಯಕರ ಪೊಲೀಸ್ ವೆರಿಫಿಕೇಷನ್ ಮಾಡಿ ಸುವ ಬಗ್ಗೆ ಎಲ್ಲಾ ಶಾಲಾ ಆಡಳಿತ ಮಂಡಳಿಗಳು ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ. ಶಾಲಾ ವಾಹನಗಳಲ್ಲಿ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಸಂದರ್ಭದಲ್ಲಿ ಖಾಸಗಿ ಶಾಲಾ ವಾಹನಗಳಲ್ಲಿ ಚಾಲಕರಿಂದ ಮತ್ತು ವಾಹನಗಳ ಸಹಾಯಕ ರಿಂದ ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಿರು ವಂತೆ
ಪ್ರಕರಣಗಳು ವರದಿಯಾಗುತ್ತಿರುವುದು ಕಂಡು ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಬಸ್,ವ್ಯಾನ್,ಆಟೋ ರಿಕ್ಷಾ ಮತ್ತು ಇತರೆ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರು ವಂತಹ ಎಲ್ಲಾ ಚಾಲಕರ ಮತ್ತು ಸಹಾಯಕರ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ಅವರ ನಡತಯ ಬಗ್ಗೆ
ನಡವಳಿಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು.ಖಾಸಗಿ ಶಾಲಾ ವಾಹನಗಳಲ್ಲಿ, ಬಸ್,ವ್ಯಾನ್,ಆಟೋ ರಿಕ್ಷಾಗಳಲ್ಲಿ ಶಾಲಾ ಮಕ್ಕ ಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನ್ನು ನಿರ್ವಹಿಸುವ ಚಾಲಕರು ಮತ್ತು ಸಹಾಯಕರ ನಡವಳಿಕೆ ಬಗ್ಗೆ ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ನಡತೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯು ವುದು
ಹಾಗೂ ಪ್ರತಿ ಎರಡು ವವರ್ಷಗಳಿಗೊಮ್ಮೆ ನವೀಕರಿಸುವುದು.ಸದರಿ ಚಾಲಕರ ಮತ್ತು ಸಹಾಯಕರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಿಂದ ಪಡೆದ ನಡವಳಿಕೆ ಪ್ರಮಾಣ ಪತ್ರವನ್ನು ಆಯಾ ಶಾಲೆಯ SATS ನಲ್ಲಿ ತಂತ್ರಾಂಶದಲ್ಲಿ ಮಾಹಿತಿಯನ್ನು ಅಪ್ ಲೋಡ್ ಮಾಡುವುದು.ಖಾಸಗಿ ಶಾಲಾ ವಾಹನಗಳಲ್ಲಿ
ಬಸ್,ವ್ಯಾನ್,ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನ್ನು ನಿರ್ವಹಿಸಲು ಸಹಾಯಕರಾಗಿ ಮಹಿಳಾ ಸಹಾಯಕರನ್ನು ನೇಮಿಸಿಕೊಳ್ಳ ಬೇಕು ಪ್ರತಿ ಖಾಸಗಿ ಶಾಲಾ ವಾಹನಗಳಲ್ಲಿ ಕಡ್ಡಾಯ ವಾಗಿ ಸಿ.ಸಿ.ಕ್ಯಾಮರ ಅಳವಡಿಸುವುದು.ಶಾಲಾ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗದಂತೆ ನಿರ್ಬಂಧಿಸುವುದು.
ಶಾಲಾ ವಾಹನಗಳಲ್ಲಿ ಕೆಲಸ ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಪ್ರತಿದಿನ ಕೆಲಸ ಪ್ರಾರಂಭದ ಮೊದಲು ಮತ್ತು ಎಲ್ಲಾ ಮಕ್ಕಳನ್ನು ಮನೆಗೆ ಬಿಟ್ಟನಂತರ ಶಾಲೆಗೆ ಬಂದು ಹಾಜರಾತಿ ಪುಸ್ತಕದಲ್ಲಿ ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು.ಸದರಿ ಮಾಹಿ ತಿಗಳನ್ನು ಪ್ರತಿ ವರ್ಷ ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿ ಅನುಮೋದನೆ ಯನ್ನು ಪಡೆಯುವುದು.
ಈ ಮೇಲ್ಕಂಡ ಅಂಶಗಳನ್ನು ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳು ಕಟ್ಟುನಿಟ್ಟಾಗಿ ಅನುಸರಿ ಸುತ್ತಿ ರುವುದನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳುವುದು.ಶಾಲಾ ಮಕ್ಕಳ ಮೇಲೆ ದೌರ್ಜನ್ಯಗಳಾಗದಂತೆ ತಡೆಗಟ್ಟಲು ಮೇಲ್ಕಂಡ ಅಂಶಗಳನ್ನು ಅನುಸರಿಸಲು ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಸೂಚನೆ ನೀಡಲು ತಿಳಿಸಿದೆ.
ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿದಲ್ಲಿ ನಿಯಮಾನು ಸಾರ ಶಿಸ್ತು ಕ್ರಮ ಜರುಗಿಸಲು ಸೂಕ್ತ ಕ್ರಮ ವಹಿಸುವುವಂತೆ ಸೂಚನೆ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..