ಬೆಂಗಳೂರು –
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಖಾಸಗಿ ಮತ್ತು ಅನುದಾನಿತ ಶಾಲೆಗಳು ಕಡ್ಡಾಯವಾಗಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಅನುಸರಿಸಬೇಕು. ಹೆಚ್ಚುವರಿಯಾಗಿ ಯಾವುದೇ ಇತರ ಪಠ್ಯಕ್ರಮ ಅಥವಾ ಪಠ್ಯಪುಸ್ತಕಗಳನ್ನು ಅನುಸರಿಸುವಂತಿಲ್ಲ.ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ದಲ್ಲಿ ಸಂಬಂಧಪಟ್ಟ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸುವು ದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಹೌದು ಕೆಲವು ಶಾಲೆಗಳು ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದು ಬಳಿಕ ಕೇಂದ್ರ ಪಠ್ಯಕ್ರಮ ಬೋಧಿಸುತ್ತಿರುತ್ತವೆ. ಆದರೆ ಅಂತಿಮ ಪರೀಕ್ಷೆ ಸಮೀಪಿಸಿದಾಗ ಪಠ್ಯಕ್ರಮದ ಸಮಸ್ಯೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಒಂದು ಸೂಚನೆಗಳನ್ನು ನೀಡಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ ನವೀಕರಣ ನೀಡುವಾಗ ಮಾನ್ಯತೆ ಪ್ರಮಾಣ ಪತ್ರದಲ್ಲಿ ಶಾಲೆಯು ಸಂಯೋಜಿತವಾಗಿರುವ ಶೈಕ್ಷಣಿಕ ರಾಜ್ಯ ಪಠ್ಯಕ್ರಮ ಹಾಗೂ ರಾಜ್ಯ ಪಠ್ಯ ಪುಸ್ತಕಗಳನ್ನು ಅನುಸರಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..