ಬೆಂಗಳೂರು –
ಪ್ರತಿ ಗ್ರಾಮ ಪಂಚಾಯ್ತಿಗೊಂದು ಮಾದರಿ ಶಾಲೆಗಳನ್ನು ನಿರ್ಮಾಣ ಮಾಡಿ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒತ್ತು ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು ಇದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ತಲೆ ಎತ್ತಲಿವೆ ಮಾದರಿಯ ಶಾಲೆಗಳು.ಹೌದು ಬೆಂಗಳೂರಿನಲ್ಲಿ ಮಾತನಾಡಿದ ಅವರು
ಪ್ರತಿ ಗ್ರಾಮ ಪಂಚಾಯತಿ ಗಳಿಗೊಂದು ತಲಾಒಂದೊಂದು ಮಾದರಿ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ಹಣಕಾಸಿನ ಲಭ್ಯತೆಯ ನಂತರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದರು
ಈ ಕುರಿತು ವಿಧಾನಸಭೆಗೆ ತಿಳಿಸಿದ ಅವರು ಶಾಸಕ ಶಿವಲಿಂಗೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, 2019-20 ರಲ್ಲಿ 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾ ಗಿದೆ. 2022-23ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಮಟ್ಟವನ್ನು ಉತ್ತಮಪಡಿಸಲು ಹೋಬಳಿ ಮಟ್ಟದಲ್ಲಿ ಮೂಲಸೌಕರ್ಯ ಇರುವ ಶಾಲೆಗ ಳನ್ನು ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸಲು ಘೋಷಣೆ ಮಾಡಲಾಗಿದೆ.ಇನ್ನೂ ಪ್ರತಿ ಗ್ರಾಮ ಪಂಚಾಯ ತಿ ಗಳಿಗೆ ಒಂದೊಂದು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಬೇಕು ಎಂದು ಶಾಸಕರು ಬೇಡಿಕೆ ಇಟ್ಟಿದ್ದಾರೆ. ನಮಗೆ ಹೊಸ ಕಟ್ಟಡಗಳು ಸಿಬ್ಬಂದಿ ಮೂಲಭೂತ ಸೌಕರ್ಯ ಸೇರಿದಂತೆ ಹಲವು ರೀತಿಯ ಸೌಲಭ್ಯಬೇಕು. ಅನುದಾನದ ಲಭ್ಯತೆ ನೋಡಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.ಇನ್ನೂ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಬೋಧನೆ ಮಾಡಲು ಇಂಗ್ಲಿಷ್ ಶಿಕ್ಷಕರ ಅಗತ್ಯವಿದೆ.ನೇಮಕಾತಿ ಮಾಡಿಕೊಳ್ಳಲು ಸಭೆ ಬೇಕಾಗು ತ್ತದೆ ಎಂದರು.
ಮಂಜುನಾಥ ಸರ್ವಿ ಸುದ್ದಿ ಸಂತೆ ನ್ಯೂಸ್ ಬೆಂಗಳೂರು