ಬೆಂಗಳೂರು –
ಖಾಸಗಿ ಶಾಲೆಗಳಂತೆಯೇ ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳನ್ನು ಕರೆದುಕೊಂಡು ಬರಲು ಕಳುಹಿಸಲು ವಾಹನದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ ಮಂಗಳೂರಿನಲ್ಲಿ ಮಾತ ನಾಡಿದ ಅವರು ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ ಜಾರಿಗೆ ಬರಲಿದೆ.
4ರಿಂದ 5 ಕಿ.ಮೀ ವ್ಯಾಪ್ತಿಯ ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಬಸ್ ಗಳನ್ನು ಉಚಿತವಾಗಿ ಪೂರೈಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ನಿಟ್ಟಿನಲ್ಲಿ ಕೆಪಿಎಸ್ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳು ಆರಂಭವಾಗಿದ್ದು ಈ ಶಾಲೆಗಳಿಗೆ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಬಸ್ ವ್ಯವಸ್ಥೆಗೆ ನಿರ್ಧರಿಸಿದೆ.
ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. ಕೆಪಿಎಸ್ ಶಾಲೆಗಳಿಗೆ ಮಕ್ಕಳು ಬರುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗು ತ್ತಿದ್ದು ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳ ಪಿಕಪ್ ಡ್ರಾಪ್ ವ್ಯವಸ್ಥೆಗೆ ಬಸ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.
ರಾಜ್ಯದಲ್ಲಿ 285 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಿದ್ದು ಪ್ರಸಕ್ತ ವರ್ಷದಿಂದ ಇನ್ನೂ 500 ಶಾಲೆಗಳು ಆರಂಭವಾಗಲಿವೆ. ಎಲ್ ಕೆಜಿಯಿಂದ 12ನೇ ತರಗತಿವರೆಗೂ ಒಂದೇ ಕಡೆ ಶಿಕ್ಷಣ ಒದಗಿಸುವ ವ್ಯವಸ್ಥೆ ಮಾಡಲಾಗುತ್ತದೆ.ಹೀಗಾಗಿ 4-5 ಕಿ.ಮೀ ವ್ಯಾಪಿಯಲ್ಲಿರುವ ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಬಸ್ ಗಳನ್ನು ಉಚಿತ ವಾಗಿ ಪೂರೈಸಲಾಗುವುದು ಎಂದರು
ಸುದ್ದಿ ಸಂತೆ ನ್ಯೂಸ್ ಮಂಗಳೂರು…..