ಬೆಂಗಳೂರು –
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2022 – 23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅಂಗನವಾಡಿಯಿಂದಲೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾ ಡಿದ ಅವರು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಮಕ್ಕಳಿಗೆ ಹಾಡು,ನೃತ್ಯ,ಆಟ,ಪಾಠಗಳ ಮೂಲಕ ಕಲಿಕೆ ಯಲ್ಲಿ ಆಸಕ್ತಿ ರೂಪಿಸುವ ಕಾರ್ಯ ಮಾಡಲಾಗುತ್ತದೆ ಎಂದರು.
ಇನ್ನೂ ಅಂಗನವಾಡಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುವ ಕಾರಣ ಅಂಗನವಾಡಿ ಕಾರ್ಯಕರ್ತೆಯ ರಿಗೆ ಈ ನಿಟ್ಟಿನಲ್ಲಿ ತರಬೇತಿ ನೀಡಲಾಗುವುದು ರಾಜ್ಯದ 20 ಸಾವಿರ ಶಾಲೆಗಳಲ್ಲಿ ಅಂಗನವಾಡಿಯಿಂದಲೇ NEP ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.