ಬೆಂಗಳೂರು –
ಶಾಲೆಗಳ ಆರಂಭಕ್ಕೆ ಸಿದ್ಧತೆಗಳು ನಡೆಯುತ್ತಿದ್ದು ಇದರೊಂದಿಗೆ ಪುಸ್ತಕ, ಸಮವಸ್ತ್ರ ಪೂರೈಕೆಯಾ ಗುತ್ತಿದ್ದು ಇದರ ಜೊತೆಯಲ್ಲಿ ಇದೇ 27ರಿಂದ ‘ನಲಿ ಕಲಿ’ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಕೆಪಿಎಸ್ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿರುವು ದರಿಂದ ಮುಂದಿನ ವರ್ಷ 500 ಕೆಪಿಎಸ್ ಶಾಲೆ ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 3,000 ಸರ್ಕಾರಿ ಶಾಲೆಗಳನ್ನು ತೆರೆಯಲಾಗುವುದು.
ಕಾರ್ಪೊರೆಟ್ ಸಂಸ್ಥೆಗಳ ಸಿಎಸ್‌ಆರ್ ನಿಧಿ ಬಳಸಿಕೊಂಡು ಪ್ರಸಕ್ತ ವರ್ಷ 500 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 3 ರಿಂದ ಗರಿಷ್ಠ 6 ಶಾಲೆಗಳನ್ನು ಅಭಿವೃದ್ಧಿಪಡಿಸಲಾ ಗುತ್ತಿದೆ ಎಂದರು.
ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗ್ರೇಸ್ ಮಾರ್ಕ್ಸ್ ಪದ್ಧತಿ ಮುಂಬರುವ ವರ್ಷಗಳಲ್ಲಿ ಇರು ವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..