This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Education News

ಕಡಿಮೆ ಮಕ್ಕಳಿರುವ ಶಾಲೆಗಳನ್ನು ಬಂದ್ ಮಾಡಲು ಸೂಚನೆ ಇಲಾಖೆಗೆ ಕಟ್ಟುನಿಟ್ಟಿನ ಆದೇಶ ಮಾಡಿದ ಶಿಕ್ಷಣ ಸಚಿವರು

Join The Telegram Join The WhatsApp

 


ಬೆಂಗಳೂರು –

 

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಂದು ಆವರಣದಲ್ಲಿ ಒಂದೇ ಮಾಧ್ಯಮದ 2ಕ್ಕಿಂತ ಹೆಚ್ಚಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ನಡೆಯುತ್ತಿದ್ದರೆ ಅಂತಹ ಶಾಲೆಗಳನ್ನು ಗುರುತಿಸಿ ಒಂದೇ ಶಾಲೆಯನ್ನಾಗಿ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

ಈ ಸಂಬಂಧ ಟಿಪ್ಪಣಿ ಹೊರಡಿಸಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಉಪ ನಿರ್ದೇಶಕರು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

 

ಒಂದೇ ಆವರಣದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳೊಂದಿಗೆ ಶಾಲೆಗಳು ನಡೆಯುತ್ತಿ ರುವುದನ್ನು ಗಮನಿಸಲಾಗಿದೆ. ಈ ರೀತಿಯ ಶಾಲೆಯಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಪೂರಕ ವಾತಾವರಣ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.

 

ಈ ಶಾಲೆಗಳಿಗೆ ಇರುವ ಪ್ರತ್ಯೇಕ ಯು-ಡೈಸ್‌ ಕೋಡ್‌ಗಳಿಗೆ ಬದಲಾಗಿ ಒಂದೇ ಯು-ಡೈಸ್‌ ಕೋಡ್‌ಗಳನ್ನು ನೀಡಲು ಇಲಾಖೆಯು ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಬೇಕು. ಕೈಗೊಂಡ ವರದಿಯನ್ನು ಕಡತದ ಮೂಲಕ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.

 

ಇನ್ನೂ  ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಂದು ಆವರಣದಲ್ಲಿ ಒಂದೇ ಮಾಧ್ಯಮದ 2ಕ್ಕಿಂತ ಹೆಚ್ಚಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ನಡೆಯುತ್ತಿದ್ದರೆ ಅಂತಹ ಶಾಲೆಗಳನ್ನು ಗುರುತಿಸಿ ಒಂದೇ ಶಾಲೆಯನ್ನಾಗಿ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 


Suddi Sante Desk

Leave a Reply