ಬೆಂಗಳೂರು –
ರಾಜ್ಯದ ಸರ್ಕಾರಿ ಶಾಲೆಗಳಿಗೆ ಬಂಪರ್ ಕೊಡುಗೆ ನೀಡಿದ ಶಿಕ್ಷಣ ಸಚಿವರು – ಶಾಲೆಗಳಿಗೆ ಸಂಪೂರ್ಣವಾಗಿ ಉಚಿತ ವಿದ್ಯುತ್,ನೀರು ಘೋಷಣೆ ಹೌದು
ರಾಜ್ಯದ ಸರ್ಕಾರಿ ಶಾಲೆಗಳಿಗೆ ಇನ್ನೂ ಮುಂದೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯ ವನ್ನು ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಇದರೊಂದಿಗೆ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನ್ನು ಸಚಿವರು ನೀಡಿದರು.
ಇನ್ನೂ ಇದರೊಂದಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ಶಾಲೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ವನ್ನು ನೀಡಲಾಗುತ್ತದೆ ಎಂದರು ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ನವೆಂಬರ್ ತಿಂಗಳಿಂದ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ಪೂರೈ ಸಲಾಗುವುದು.ಸರ್ಕಾರಿ ಶಾಲೆಗಳಿಗೆ ಉಚಿತ ವಾಗಿ ವಿದ್ಯುತ್ ಹಾಗೂ ನೀರು ನೀಡಿದರೆ ವಿದ್ಯಾರ್ಥಿಗಳಿಗೆ ಶಿಕ್ಷಕರುಗಳಿಗೆ ಅನುಕೂಲವಾ ಗಲಿದೆ.
ಎಷ್ಟೋ ಶಾಲೆಗಳು ವಿದ್ಯುತ್ ಬಿಲ್‌ಗೆ ಹೆದರುವ ಅಗತ್ಯವಿಲ್ಲವೆಂದರು.ಇನ್ನೂ ಶಾಲಾ ಮಕ್ಕಳಿಗೆ ಇನ್ನು ಮುಂದೆ ಎರಡು ಮೊಟ್ಟೆ ನೀಡಲಾಗುವದು, ಕ್ಷೀರ ಭಾಗ್ಯ ಪಾಲಿನಲ್ಲಿ ರಾಜ್ಯ ಮಾಲ್ಟ್ ಕೊಡು ತ್ತೇವೆ.ಕ್ಷೀರ ಭಾಗ್ಯ ಪಾಲಿನಲ್ಲಿ ರಾಗಿ ಮಾಲ್ಟ್ ಹಾಕಿ, ಮೈಸೂರಿನ ಸಿಎಫ್ ಟಿಆರ್‌ಐನಲ್ಲಿ ಟೆಸ್ಟ್ ಮಾಡಿಸುತ್ತಿದ್ದೇವೆ.
ಮಕ್ಕಳ ಪೌಷ್ಟಿಕಾಂಶ ಜಾಸ್ತಿ ಮಾಡಲು ಪ್ರಯತ್ನಿ ಸುತ್ತಿದ್ದೇವೆ ಅಂತ ಹೇಳಿದರು ಇದರೊಂದಿಗೆ ಸರ್ಕಾರಿ ಶಾಲೆಗಳಿಗೆ ಮಕ್ಕಳಿಗೆ ಶಿಕ್ಷಣ ಸಚಿವರು ಹೊಸದೊಂದು ಸಿಹಿ ಸುದ್ದಿಯನ್ನು ನೀಡಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..