ಬೆಳಗಾವಿ –
ಶಾಲೆಗಳಿಗೆ ಚಕ್ಕರ್ ಹಾಕುವ ಶಿಕ್ಷಕರಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವರು – ಶಾಲೆಗೆ ಚಕ್ಕರ್ ಬೇರೆ ಕೆಲಸಕ್ಕೆ ಹಾಜ ರಾಗುವ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ಸಂದೇಶ ನೀಡಿದ ಸಚಿವರು
ಶಾಲೆಗಳಿಗೆ ಬಾರದೆ ಬೇರೆ ಕೆಲಸಗಳಲ್ಲಿ ಕಾಣಿಸಿ ಕೊಳ್ಳುವ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಅವರು ಕೆಲ ಶಿಕ್ಷಕರು ಪಾಠವನ್ನು ಮಾಡದೇ ಬೇರೆ ಬೇರೆ ಕೆಲಸ ಕಾರ್ಯಗಳಲ್ಲಿ ಶಾಲಾ ಅವಧಿಯಲ್ಲಿ ತೊಡಗಿಕೊಂಡಿರುವುದು ಕಂಡು ಬರುತ್ತಿದ್ದು ಗಮನಕ್ಕೆ ಬಂದ ಕೂಡಲೇ ಸೂಕ್ತ ಕ್ರಮವನ್ನು ಕೈಗೊಳ್ಳುವುದಾಗಿ ಹೇಳುತ್ತಾ ಶಿಕ್ಷಕರಿಗೆ ಇದರೊಂದಿಗೆ ಖಡಕ್ ಎಚ್ಚರಿಕೆ ನೀಡಿದರು.
ಶಾಲೆಗೆ ಬಂದು ಮಕ್ಕಳಿಗೆ ಪಾಠ ಮಾಡುವುದನ್ನು ಬಿಟ್ಟು ಶಾಲೆಗೆ ಚಕ್ಕರ್ ಹಾಕಿ ಬೇರೆ ಬೇರೆ ಕೆಲಸದಲ್ಲಿ ತೊಡಗುವ ಶಿಕ್ಷಕರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗು ವುದು ಶಿಕ್ಷಕರಾದವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕು.ಅದನ್ನು ಬಿಟ್ಟು ಬೇರೆ ಬೇರೆ ಕೆಲಸ ಸಂಘಟನೆ ಯಲ್ಲಿ ಗುರುತಿಸಿಕೊಂಡರೆ ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುವುದು.
ಶಿಕ್ಷಕರು ತಮ್ಮ ಬೇಡಿಕೆ ಈಡೇರಿಸಲು ಪ್ರತಿಭಟನೆ ಮಾಡಿದರೆ ತಪ್ಪಲ್ಲ ಪ್ರತಿಭಟನೆ ಮಾಡುವ ಹಕ್ಕು ಇದೆ ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ರಜೆ ಹಾಕಿ ಮಕ್ಕಳಿಗೆ ತೊಂದರೆಯಾಗುವಂತೆ ಮಾಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೆಂ ದರು.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..