ಬೆಂಗಳೂರು –
ಕೋವಿಡ್ ಕಾರಣದಿಂದಾಗಿ ಶಿಕ್ಷಣ ಕ್ಷೇತ್ರವು ತೀವ್ರ ವಾದ ಸಂಕಷ್ಟಕ್ಕೆ ಸಿಲುಕಿದ್ದು ಸರ್ಕಾರ ವಿಧಿಸಿದ ಲಾಕ್ ಡೌನ್ ನಿಂದಾಗಿ ರಾಜ್ಯಾದ್ಯಂತ ಇರುವ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಮೇಲೆ ಅವಲಂಬಿಸಿದ್ದವರ ತೊಂದರೆಯಾಗಿದ್ದು ಹೀಗಾಗಿ ಇದನ್ನು ಅವಲಂಬಿಸಿದ ಶಿಕ್ಷಕರ ಪರವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಧ್ವನಿ ಎತ್ತಿದ್ದಾರೆ

ತೀವ್ರತರವಾದ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ನೆರವು ನೀಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ವಿಶೇಷ ಪ್ಯಾಕೇಜ್ ನೀಡುವಂತೆ ಘೋಷಣೆ ಮಾಡುವಂತೆ ಒತ್ತಾಯ ಮಾಡಿದ್ದಾರೆ ಒಟ್ಟಾರೆ ಆ ಶಿಕ್ಷಕರ ಪರವಾಗಿ ಸುರೇಶ್ ಕುಮಾರ್ ಧ್ವನಿ ಎತ್ತಿದ್ದು ಇದಕ್ಕೆ ಮುಖ್ಯಮಂತ್ರಿ ಯಾವ ರೀತಿಯಾಗಿ ಸ್ಪಂದಿ ಸುತ್ತಾರೆ ಎಂಬುದನ್ನು ಕಾದು ನೋಡಬೇಕು
