ಬೆಂಗಳೂರು –
ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಯನ್ನು ಶಿಕ್ಷಣ ಸಚಿವರು ನೀಡಿದ್ದು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಡಿಸೆಂಬರ್ ನಲ್ಲಿ ಆರಂಭಿಸಲು ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪರಸ್ಪರ ವರ್ಗಾವಣೆ ಕಾಯ್ದೆಗೆ ನಿಯಮ ರೂಪಿಸಲಾಗಿದೆ.ಈಗಾಗಲೇ ಅಧಿವೇಶನದಲ್ಲಿ ಅನುಮೋದನೆ ಪಡೆದುಕೊಂಡ ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ ಅನ್ವಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು.
ವಿಧಾನಸಭೆ ಚುನಾವಣೆ ನಡೆಯುವುದರಿಂದ ಶಿಕ್ಷಕರನ್ನು ಚುನಾವಣೆ ಕಾರ್ಯಕ್ಕೆ ನೇಮಿಸಲಾ ಗುತ್ತದೆ ಹಾಗೂ ಪರೀಕ್ಷೆಗಳು SSLC ಮೌಲ್ಯಮಾ ಪನ ಕಾರ್ಯದಲ್ಲಿ ಶಿಕ್ಷಕರು ತೊಡಗಿಕೊಳ್ಳಬೇಕಿ ರುವುದರಿಂದ ಬೇಸಿಗೆ ರಜೆಯಲ್ಲಿ ವರ್ಗಾವಣೆ ನಡೆಸಲು ಸಾಧ್ಯವಾಗುವುದಿಲ್ಲ.
ಹೀಗಾಗಿ ಡಿಸೆಂಬರ್ ನಲ್ಲಿ ವರ್ಗಾವಣೆ ಪೂರ್ಣ ಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.ಇದರೊಂದಿಗೆ ವರ್ಗಾವಣೆ ನಿರೀಕ್ಷೆ ಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿಯನ್ನು ಇಲಾಖೆ ನೀಡಿದ್ದು ಸಾಮಾನ್ಯ ವರ್ಗಾವಣೆಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.