ಬೆಂಗಳೂರು –
ಇನ್ನೇನು ಎರಡು ಮೂರು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಹೀಗಾಗಿ ಈಗಲೇ ರಾಜ್ಯ ಚುನಾವಣಾ ಆಯೋಗವು ಭರ್ಜರಿಯಾದ ತಯಾರಿಯನ್ನು ನಡೆಸಿದ್ದು ಬೆಂಗಳೂರಿನಲ್ಲಿ ಚುನಾವಣಾ ಆಯುಕ್ತರು ಮಹತ್ವದ ಸಭೆಯನ್ನು ನಡೆಸಿದರು
2023ರ ಮೇ 23 ಕ್ಕೆ ಅವಧಿ ಮುಗಿಯಲಿದ್ದು ಹೀಗಾಗಿ ವಿಧಾನಸಭೆ ಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷಗಳ ಜೊತೆಗೆ ಚುನಾವಣಾ ಆಯೋಗವು ಸಹ ಚುನಾವಣೆಗೆ ಸಿದ್ಧತೆಗಳನ್ನು ಕೈಗೊಂಡಿದೆ.ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿಯಲ್ಲಿ ಪೂರ್ವತಯಾರಿ ಕಾರ್ಯ ಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ. ಸಿ.ಪಾತ್ರ ಸಭೆ ಮಾಡಿ ದರು.
ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ವೀಕ್ಷಿಸಲು ಇಬ್ಬರು ಅಧಿಕಾರಿಗಳು ಮುಖ್ಯ ಚುನಾವಣಾ ಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂ ದಿಗೆ ಸಭೆ ನಡೆಸಿದರು.ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾ ವಣಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಪ್ರಮುಕವಾಗಿ ಈ ಒಂದು ಸಭೆಯಲ್ಲಿ ಮುಖ್ಯ ವಾಗಿ ಇದೇ ತಿಂಗಳು ಪ್ರಕಟವಾಗಲಿರುವ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದವು. ಮೃತ ಪಟ್ಟವರ ಹೆಸರುಗಳನ್ನು ತೆಗೆದು ಹಾಕು ವುದು ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರುಗಳ ಸೇರ್ಪಡೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿ ಕಾರಿಗಳಿಗೆ ಸೂಚಿಸಲಾಯಿತು.
ಮತದಾರರ ಪಟ್ಟಿಯಲ್ಲಿ ಮಾಹಿತಿ ಸರಿಯಾಗಿ ರಬೇಕು ಜೊತೆಗೆ ಯಾವುದೇ ಕಾರಣದಿಂದ ಇರು ವವರ ಹೆಸರುಗಳನ್ನು ಕೈ ಬಿಡದಂತೆ ಜಾಗೃತಿವ ಹಿಸಬೇಕು,ಜಿಲ್ಲಾ ಚುನಾವಣಾಧಿಕಾರಿಗಳು ಖುದ್ದು ಬೇಟಿ ನೀಡಿ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಲಾಯಿತು.ಇನ್ನೂ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿರುವ ಬಗ್ಗೆ ನಿಗಾವಹಿ ಸಬೇಕು ಎಂದು ತಿಳಿಸಲಾಗಿದೆ.
ಮತದಾರರ ಪಟ್ಟಿಯ ತಯಾರಿಯಲ್ಲಿ ತಮ್ಮ ಜಿಲ್ಲಾ ವ್ಯಾಪ್ತಿಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಸೇರ್ಪಡೆಗೊಂಡಿರುವ ಮತ್ತು ತೆಗೆದುಹಾಕಿರುವ 10 ಮತಕೇಂದ್ರಗಳನ್ನು ಗುರುತಿಸಿ ಅವುಗಳಿಗೆ ಸರಿಯಾದ ಕಾರಣಗಳನ್ನು ಹುಡುಕಿ ಗುರುತಿಸುವಂತೆ ಸೂಚಿಸಲಾಗಿದೆ.
ಹಿಂದಿನ ಚುನಾವಣಾ ಸಂದರ್ಭದಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಶೇಕಡಾವಾರು ಮತದಾನ ವನ್ನು ಹೆಚ್ಚಿಸಲು ಸೂಕ್ತ ಕ್ರಮಕೈಗೊಳ್ಳುವುದು ಹಾಗೂ ಮತದಾರರ ಜಾಗೃತಿಗಾಗಿ ಹೆಚ್ಚಿನ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ಸಲಹೆ ನೀಡಲಾಗಿದೆ.ಚುನಾವಣಾ ಕಾರ್ಯಕ್ಕಾಗಿ ಅವಶ್ಯವಿರುವ ಮಾನವ ಸಂಪನ್ಮೂಲ ಕುರಿತು ಸಹ ಚರ್ಚೆ ನಡೆದಿದೆ ತಮಗೆ ಅವಶ್ಯವಿರುವ ಸ್ಥಾನಗಳ ಕುರಿತು ಕೂಡಲೇ ಮುಖ್ಯ ಚುನಾವ ಣಾಧಿಕಾರಿಗಳ ಕಚೇರಿಯ ಗಮನಕ್ಕೆ ತರಲು ನಿರ್ದೇಶನ ಕೊಡಲಾಗಿದೆ.
ಎರಡು ದಿನಗಳ ಬೇಟಿಯಲ್ಲಿ ಮೊದಲ ದಿನ ರಾಜ್ಯ ಮಟ್ಟದ ಹಾಗೂ ಎರಡನೇ ದಿನ ಜಿಲ್ಲಾ ಮಟ್ಟದ ಸಭೆ ನಡೆಸಿದ ನಂತರ ಪೂರ್ವ ತಯಾರಿ ಬಗ್ಗೆ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದರು. ಉತ್ತಮವಾಗಿ ಚುನಾವಣೆ ನಡೆಸಲು ಎಲ್ಲರೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕರೆ ನೀಡಲಾಯಿತು ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ,ಅಪರ ಮುಖ್ಯ ಚುನಾವಣಾ ಧಿಕಾರಿಗಳಾದ ವೆಂಕಟೇಶ್ ಕುಮಾರ್, ಪಿ. ರಾಜೇಂದ್ರ ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
2023ರಲ್ಲಿ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕ ಸಹ ಸೇರಿದ್ದು ರಾಜ್ಯದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಮೇ 20ರೊಳಗೆ ರಾಜ್ಯದಲ್ಲಿ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿರುವುದನ್ನು ಇಲ್ಲಿ ನೆನಪಿಕೊಳ್ಳಬಹುದಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..