ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ತಂದೆ ಗೆ 30 ವರ್ಷ ಜೈಲು ಶಿಕ್ಷೆ – ಮಾಡಬಾರದ ಕೆಲಸ ಮಾಡಿ ಜೈಲು ಸೇರಿದ ಪಾಪಿ ತಂದೆ…..

Suddi Sante Desk
ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ತಂದೆ ಗೆ 30 ವರ್ಷ ಜೈಲು ಶಿಕ್ಷೆ – ಮಾಡಬಾರದ ಕೆಲಸ ಮಾಡಿ ಜೈಲು ಸೇರಿದ ಪಾಪಿ ತಂದೆ…..

ಬೆಂಗಳೂರು

ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ತಂದೆ ಗೆ 30 ವರ್ಷ ಜೈಲು ಶಿಕ್ಷೆ – ಮಾಡಬಾರದ ಕೆಲಸ ಮಾಡಿ ಜೈಲು ಸೇರಿದ ಪಾಪಿ ತಂದೆ ಹೌದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಲ ತಂದೆಗೆ 30 ವರ್ಷ ಜೈಲು ಶಿಕ್ಷೆ ನೀಡಿದ ಘಟನೆ ಮೈಸೂರಿ ನಲ್ಲಿ ನಡೆದಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಮಲ ತಂದೆಗೆ 30 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ವಿಧಿಸಿ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕು ಹಲಗವಾಡಿ ಗ್ರಾಮದ ಪರಮಾನಂದ (31) ಅಪರಾಧಿ.

ಅಲ್ಲದೆ, ಕೊಲೆ ಬೆದರಿಕೆ ಒಡ್ಡಿದ್ದ ಪ್ರಕರಣದಲ್ಲಿ ನ್ಯಾಯಾಲಯ 6 ತಿಂಗಳು ಸಾದಾ ಸಜೆ ಹಾಗೂ ₹ 1ಲಕ್ಷ ದಂಡ ವಿಧಿಸಿದೆ. ದಂಡ ಪಾವತಿಸಲು ತಪ್ಪಿ ದರೆ ಆರು ತಿಂಗಳ ಸೆರೆವಾಸ ಅನುಭವಿಸಬೇಕಾ ಗಿದೆ. ₹75 ಸಾವಿರವನ್ನು ಬಾಲಕಿಗೆ ಪರಿಹಾರ ವಾಗಿ ನೀಡಬೇಕು ಹಾಗೂ ₹25 ಸಾವಿರವನ್ನು ರಾಜ್ಯ ಸರ್ಕಾರಕ್ಕೆ ಕೊಡಬೇಕು ಎಂದು ತಿಳಿಸಲಾ ಗಿದೆ.

ಸಂತ್ರಸ್ತ ಬಾಲಕಿ ₹5 ಲಕ್ಷ ಪರಿಹಾರಕ್ಕೆ ಅರ್ಹಳು ಎಂದೂ ನ್ಯಾಯಾಧೀಶೆ ಶೈಮಾ ಕಮ್ರೋಜ್ ಆದೇಶದಲ್ಲಿ ತಿಳಿಸಿದ್ದಾರೆ.2ನೇ ಮದುವೆಯಾಗಿದ್ದ ವ್ಯಕ್ತಿಯು, ಆಕೆಯ ಮಕ್ಕಳೊಂದಿಗೆ ವಾಸವಾ  ಗಿದ್ದ. 2022ರ ಅ.24ರಂದು ಪತ್ನಿ ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ಸಮಯದಲ್ಲಿ, ಮನೆಯಲ್ಲಿದ್ದ 14 ವರ್ಷ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ರೂಂನಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಪರಮಾನಂದ,

ಆ ವಿಚಾರವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದ. ರಾತ್ರಿ ಲೈಂಗಿಕ ಕಿರುಕುಳ ನೀಡಲು ಮುಂದಾದಾಗ ಬಾಲಕಿಯು ಕಿರುಚಿ ಕೊಂಡು ಓಡಿ ಹೋಗಿ ದೇವರ ಕೋಣೆಯಲ್ಲಿ ಬಚ್ಚಿಟ್ಟುಕೊಂಡಿದ್ದಳು. ಆತ ಹುಬ್ಬಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು.

ಆತ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಮದುವೆ ಮಾಡಿಕೊಳ್ಳಲು ಹಿಂಸೆ ನೀಡುತ್ತಿದ್ದುದ್ದರಿಂದ ಬಾಲಕಿಯು ತಾಯಿ ಮನೆಯಲ್ಲಿಲ್ಲದ ವೇಳೆ ಮನೆ ಬಿಟ್ಟು ಹೋಗಿದ್ದಳು. ಮಹಿಳೆಯು ಮಗಳು ಕಾಣೆ ಯಾದ ಬಗ್ಗೆ ದೂರು ನೀಡಿದ್ದರು. ತನಿಖೆ ನಡೆಸಿದ ಇನ್‌ಸ್ಪೆಕ್ಟರ್‌ ಮಹೇಶ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.