ನಾಳೆ ನಡೆಯಬೇಕಾಗಿದ್ದ FDA ಪರೀಕ್ಷೆ ಮುಂದೂಡಿಕೆ

Suddi Sante Desk

ಬೆಂಗಳೂರು –

ನಾಳೆ ನಡೆಯಬೇಕಿದ್ದ ಕೆಪಿಎಸ್ಸಿ FDA ಪರೀಕ್ಷೆಗಳು ಮುಂದೂಡಲಾಗಿದೆ. ಪ್ರಶ್ನೆಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಆಯೋಗ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಲಾಗಿದೆ.

ನಾಳೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆಯನ್ನು ಆಯೋಗ ಮಾಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಬಂಧಿಸಿದಂತೆ, ದಿನಾಂಕ:23-01-2021 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ದಿನಾ ಎರಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.

ದಿನಾಂಕ:23-01-2020 ಮತ್ತು 24-01-2021ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ದುಷ್ಕರ್ಮಿಗಳ ಕೈಸೇರಿರುವುದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರೀಕ್ಷೆಯನ್ನು ಮುಂದೂಡಿದ್ದಾರೆ.

24-01-2021ರಂದು ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ತಿಳಿಸಿದ್ದಾರೆ.

ಸದರಿ ಪರೀಕ್ಷಾ ದಿನಾಂಕವನ್ನು ಮರು ನಿಗದಿಪಡಿ ತಿಳಿಸಲಾಗುವುದು ಎಂದಿದ್ದಾರೆ‌.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.