ಬೆಂಗಳೂರು –
ಲೋಕಸಭಾ ಸಮರದ ಕಾಂಗ್ರೇಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ – 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ರಾಜ್ಯದ 7 ಕ್ಷೇತ್ರಗಳ ಅಭ್ಯರ್ಥಿ ಗಳು ಪಟ್ಟಿಯಲ್ಲಿ ಹೌದು
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಜೆಪಿ ಈಗಾಗಲೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರ ಬೆನ್ನಲ್ಲೇ ಇತ್ತ ಕಾಂಗ್ರೇಸ್ ಪಕ್ಷವು ಕೂಡಾ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಹೌದು 39 ಅಭ್ಯರ್ಥಿಗಳ ಹೆಸರುಗಳನ್ನು ಒಳಗೊಂಡಿ ರುವ ಮೊದಲ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಬಿಡುಗಡೆ ಮಾಡಿದ್ದಾರೆ.
ಇದರೊಂದಿಗೆ ಕೈ ಪಡೆಯ ಮೊದಲ ಪಟ್ಟಿ ಬಿಡುಗಡೆಯಾದಂತಾಗಿದೆ.ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿ ಗಳು ಕೂಡಾ ಪೈನಲ್ ಮಾಡಲಾಗಿದೆ. ಲೋಕ ಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಂಬಂಧ ನಿನ್ನೆಯಷ್ಟೇ ದೆಹಲಿಯಲ್ಲಿ ಮಹತ್ವದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿತ್ತು.ಈ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ಕೂಡಾ ನಡೆದಿತ್ತು.
ಇದರ ಬೆನ್ನಲ್ಲೇ ಸಧ್ಯ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಚಿತ್ರನಟ ಶಿವರಾಜ್ ಕುಮಾರ್ ಪತ್ನಿ ಯವರಿಗೆ ಶಿವಮೊಗ್ಗ ದಿಂದ ಟಿಕೆಟ್ ನೀಡ ಲಾಗಿದೆ.ಇನ್ನೂಳಿದಂತೆ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಯಾವಾಗ ಬಿಡುಗಡೆ ಆಗಲಿದೆ ಎಂಬೊದು ತೀವ್ರ ಕುತೂಹಲ ಕೆರಳಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..