ಬೆಂಗಳೂರು –
ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ ಮಾಜಿ ಎಂಎಲ್ಸಿ ಎಸ್.ಎಲ್.ಘೋಟ್ನೇಕರ್, ಕೋಚಿ ಮುಲ್ ನಿರ್ದೇಶಕ ವಡಗೂರು ಹರೀಶ್‍ಗೌಡ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ,ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಸೇರ್ಪಡೆ ಯಾದ ಮುಖಂಡರು
ಹೌದು ವಿಧಾನಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳು ಬಾಕಿ ಇರುವಂತೆಯೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖರ ಸೇರ್ಪಡೆ ಮುಂದುವರಿದಿದೆ.ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ್ ಹಾಗೂ ಕೋಲಾರದ ಮಾಜಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಮತ್ತು ಕೋಚಿಮುಲ್ ನಿರ್ದೇಶಕ ವಡಗೂರು ಹರೀಶ್‍ಗೌಡ ತಮ್ಮ ಬೆಂಬಲಿಗ ರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ವೀರಭದ್ರಪ್ಪ ಹಾಲರವಿ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದರೆ.ಎಸ್.ಎಲ್. ಘೋಟ್ನೇಕರ್ ಮತ್ತು ವಡಗೂರು ಹರೀಶ್‍ಗೌಡ ಅವರು ಕಾಂಗ್ರೆಸ್ ಪಕ್ಷ ತೊರೆದು ತಮ್ಮ ಬೆಂಬಲಿ ಗರೊಂದಿಗೆ ಜೆಡಿಎಸ್ ಸೇರ್ಪಡೆಯಾದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಇಬ್ರಾಹಿಂ ಅವರು ಈ ಮೂವರು ಮುಖಂಡರಿಗೆ ಪಕ್ಷದ ಧ್ವಜ ನೀಡಿ ಜೆಡಿಎಸ್ ಶಾಲು ಹೊದಿಸಿ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಎಪ್ಪತ್ತು ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆ ಮಾಡಿದ್ದೇವೆ.ಉತ್ತರ ಕರ್ನಾಟಕ ಭಾಗದಲ್ಲೂ ಜನ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು. ನವಲಗುಂದ ಕ್ಷೇತ್ರದಲ್ಲಿ ಒಬ್ಬರು ನಮ್ಮ ಪಕ್ಷ ಬಿಟ್ಟು ಹೋಗಿದ್ದರು.ಅಲ್ಲೂ ಕೂಡ ಭಾರೀ ಪ್ರಮಾಣದಲ್ಲಿ ಜನ ಸೇರಿದ್ದರು ಎಲ್ಲೆಡೆ ನಿರೀಕ್ಷೆಗೂ ಮೀರಿ ಜನ ಸೇರುತ್ತಿದ್ದಾರೆ ಎಂದರು.
ಕೊನೆಯ ಹಂತದಲ್ಲಿ ಮೈಸೂರು-ಮಂಡ್ಯ ಅಥವಾ ಹಾಸನದ ಭಾಗದಲ್ಲಿ ಪಂಚರತ್ನ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮ ಮಾಡಲಿದ್ದೇವೆ.ಕನಿಷ್ಠ ಹತ್ತು ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಸೇರಲಿದ್ದಾರೆ ಎಂದ ಮಾಜಿ ಮುಖ್ಯಮಂತ್ರಿ ಅವರು ಹಲವಾರು ಭಾಗಗಳಿಂದ ಪ್ರಮುಖ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ.
ಕಾರವಾರ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಸ್ಥಾನ ಗಳನ್ನು ಗೆಲ್ಲುವ ಅವಕಾಶ ಇದೆ.2023ಕ್ಕೆ ಘೊಟ್ನೇಕರ್ ಮತ್ತು ಹಾಲರವಿ ಆಯ್ಕೆ ಆಗಿ ವಿಧಾನಸಭೆಗೆ ಬರುತ್ತಾರೆ ಯಾವುದೇ ಸಂಶಯ ಬೇಡ ಎಂದು ಹೇಳಿದರು.ಬೆಳಗಾವಿ ಜಿಲ್ಲೆಯಲ್ಲೂ ಸಹ ಹದಿನೆಂಟರಲ್ಲಿ ಆರೇಳು ಸ್ಥಾನ ಗೆಲ್ಲುವ ವಾತಾವರಣ ಇದೆ. ಜೆಡಿಎಸ್ ಅಚ್ಚರಿಯ ರೀತಿಯಲ್ಲಿ ಗೆದ್ದು ಬೀಗಲಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಕೆ ಎನ್ ತಿಪ್ಪೇ ಸ್ವಾಮಿ,ಇಂಚರ ನಾರಾಯಣಸ್ವಾಮಿ,ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ,ಕೋಲಾರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಪ್ರಕಾಶ್, ಪ್ರಕಾಶ್ ಅಂಗಡಿ ಹುಬ್ಬಳ್ಳಿ ಧಾರವಾಡ,ಉತ್ತರ ಕನ್ನಡ ಜಿಲ್ಲೆಯ ಅನೇಕ ಮುಖಂಡರು ಉಪಸ್ಥಿತ ರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..