ಹುಬ್ಬಳ್ಳಿ –
ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಲ್ಲಿ ಒಂದಾಗಿರುವ ರಾಷ್ಟ್ರೀಯ ಹೆದ್ದಾರಿಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ದೀಪ ಬೆಳಗುವ ಮೂಲಕ ಹುಬ್ಬಳ್ಳಿಯಲ್ಲಿ ಉದ್ಘಾಟಿಸಿದರು.
ಗಬ್ಬೂರಿನ ಟ್ರಕ್ ಟರ್ಮಿನಲ್ ಜಂಕ್ಷನ್ ಬಳಿ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ 12,795 ಕೋಟಿ ರೂಪಾಯಿ ವೆಚ್ಚದ 925 ಕಿ.ಮೀ. ಉದ್ದದ 26 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕು ಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆಗೊಳಿಸುವ ಕಾರ್ಯಕ್ರಮ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಇನ್ನೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ,ಸಚಿವ ಶ್ರೀರಾಮಲು ಸೇರಿದಂತೆ ಹಲವು ಜನಪ್ರತಿನಿಧಿಗಳು ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.