ಬೆಂಗಳೂರು –
ಒಂದು ಕಡೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಒಮಿಕ್ರಾನ್ ಹೆಚ್ಚಾಗುತ್ತಿದ್ದು ಇದರ ನಡುವೆ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಳ ಕಂಡು ಬರುತ್ತಿದ್ದು ಹೀಗಾಗಿ ರಾಜ್ಯದಲ್ಲಿ ಶಾಲೆಗ ಳನ್ನು ಬಂದ್ ಮಾಡಬೇಕು ಎಂಬ ಒತ್ತಾಯ ಒತ್ತಡ ಕೇಳಿ ಬರುತ್ತಿದ್ದು ಇವೆಲ್ಲದರ ನಡುವೆ ಹೆಚ್ಚಾಗುತ್ತಿರುವ ಕೋವಿಡ್ ನ ನಡುವೆ ರಾಜ್ಯದಲ್ಲಿನ ಶಾಲೆಗಳ ಭವಿಷ್ಯ ಕುರಿತಂತೆ ಇಂದು ಚರ್ಚೆಯಾಗುತ್ತಿದೆ.ಹೌದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ನೇತ್ರತ್ವದಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಈ ಕುರಿತಂತೆ ಚರ್ಚೆಯಾಗಲಿದ್ದು ಮಹತ್ವದ ಮಾಹಿತಿಯನ್ನು ಚರ್ಚೆ ಮಾಡಿ ನಿರ್ಧಾರವನ್ನು ತಗೆದುಕೊಳ್ಳಲಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಒಂದು ಕಡೆ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಶಾಲೆ ಬಂದ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದು ಇಂದು ಈ ಕುರಿತು ಚರ್ಚೆ ಮಾಡುತ್ತಿದ್ದಾರೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಜ್ಞರ ಜೊತೆಗೆ ಸಭೆ ನಡೆಸಿದ್ದು ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾದರೆ ಒಂದೆರಡು ವಾರದಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಬಂದ್ ಮಾಡುವ ಕುರಿತಂತೆ ಶಿಕ್ಷಣ ಇಲಾಖೆಯಿಂದ ಯಾವುದೇ ನಿರ್ಧಾರ ಕೈಗೊಳ್ಳಲಾಗುವುದಿಲ್ಲ ಇಂದು ಸಿಎಂ ಬಸವರಾ ಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ತಮ್ಮ ಸಲಹೆ, ಅಭಿಪ್ರಾಯವನ್ನು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬಹುದು ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದು ಇಂದಿನ ಸಭೆಯಲ್ಲಿ ಯಾವ ನಿರ್ಧಾರವನ್ನು ತಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು.