ರಾಷ್ಟ್ರಪತಿ ಚುನಾವಣೆ ಗೆ ರಾಜ್ಯದಲ್ಲೂ ಸಕಲ ಸಿದ್ದತೆ ನಿರ್ಧಾರವಾಗಲಿದೆ ಅಭ್ಯರ್ಥಿ ಗಳ ಭವಿಷ್ಯ…..

Suddi Sante Desk

ಬೆಂಗಳೂರು

ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ ನಡೆಯಲಿದ್ದು ಅದರಂತೆ ರಾಜ್ಯದಲ್ಲೂ ಮತದಾನಕ್ಕೆ ವಿಧಾನಸೌಧದ 106ನೇ ಸಂಖ್ಯೆಯ ಕೊಠಡಿ ಸಜ್ಜುಗೊಂ ಡಿದೆ.ರಾಷ್ಟ್ರಪತಿ ಚುನಾವಣೆಗೆ ಮತದಾರರಾಗಿರುವ 224 ಶಾಸಕರ ಜೊತೆಗೆ ವಿಶೇಷ ಅನುಮತಿ ಪಡೆದಿದ್ದಾರೆ ಇಬ್ಬರು ಸಂಸದರು ಇನ್ನೂ ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ.ಕೇಂದ್ರ ಚುನಾವಣ ಆಯೋಗದ ವಿಶೇಷ ವೀಕ್ಷಕ ಅಮಿತ್‌ ಕುಮಾರ್‌ ಘೋಷ್‌ ಮಾರ್ಗದರ್ಶನದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಹಾಗೂ ಸಹಾಯಕ ಚುನಾವಣಾ ಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ನೇತೃತ್ವದಲ್ಲಿ ಮತದಾನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಸಾಮಾನ್ಯವಾಗಿ ಲೋಕಸಭಾ ಸದಸ್ಯರು ಸಂಸತ್ತಿನಲ್ಲಿ ಮತ ಚಲಾಯಿಸಬೇಕು.ಆದರೆ ವಿಶೇಷ ಸಂದರ್ಭಗಳಲ್ಲಿ ಕೇಂದ್ರ ಚುನಾವಣ ಆಯೋಗದ ಅನುಮತಿ ಪಡೆದು ಆಯಾ ರಾಜ್ಯಗಳಲ್ಲೂ ಸಂಸದರು ಮತ ಹಾಕಬಹುದು. ಅದರಂತೆ ಚಾಮರಾಜ ನಗರದ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಹಾಗೂ ರಾಜ್ಯ ಸಭಾ ಸದಸ್ಯರಾಗಿರುವ ಎಚ್‌.ಡಿ. ದೇವೇಗೌಡರು ವಿಧಾನಸೌಧದಲ್ಲಿ ಮತ ಚಲಾಯಿಸಲಿ ದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಗೌಪ್ಯ ಮತದಾನ ನಡೆಯಲಿದ್ದು ವಿಧಾನಸೌಧದ 106ನೇ ಸಂಖ್ಯೆಯ ಕೊಠಡಿಯನ್ನು ಮತದಾನ ಕೇಂದ್ರವನ್ನಾಗಿ ಮಾಡಲಾಗಿದೆ.ಇಲ್ಲಿ ಎರಡು ಭಾಗಗಳನ್ನು ಮಾಡಲಾಗಿದೆ.ವಿಧಾನ ಸಭೆ ಸಚಿವಾಲಯ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿ ಗಳು ಸೇರಿ ಒಟ್ಟು 70ಕ್ಕೂ ಹೆಚ್ಚು ಸಿಬಂದಿಯನ್ನು ಮತ ದಾನ ಪ್ರಕ್ರಿಯೆಯ ನಿರ್ವಹಣೆಗೆ ನಿಯೋಜಿಸಲಾಗಿದೆ. ವಿದ್ಯುತ್‌ ಹಾಗೂ ಮತ್ತಿತರ ತಾಂತ್ರಿಕ ವಿಷಯಗಳ ನಿರ್ವ ಹಣೆಗೆ ಲೋಕೋಪಯೋಗಿ ಇಲಾಖೆ ಸಿಬ್ಬಂದಿಯನ್ನು ನೇಮಿಸಲಾಗಿದೆ.ಭದ್ರತೆಗೆ ಅಗತ್ಯ ಪೊಲೀಸ್‌ ಸಿಬ್ಬಂದಿ ಯನ್ನು ನಿಯೋಜಿಸಲಾಗಿದೆ ಮತದಾನ ಕೇಂದ್ರಕ್ಕೆ ಸಿಸಿ ಟಿವಿ ಕೆಮರಾ ಅಳವಡಿಸಲಾಗಿದೆ.

ಮತದಾನಕ್ಕಾಗಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದಾಗ ಸರತಿ ಸಾಲು ಹಾಗೂ ದಟ್ಟಣೆ ತಪ್ಪಿಸಲು ವಿಧಾನಸೌಧದ ಕೊಠಡಿ ಸಂಖ್ಯೆ 109 ಅನ್ನು ವೇಟಿಂಗ್‌ ರೂಂ ಅಂತಾ ವ್ಯವಸ್ಥೆ ಮಾಡಲಾಗಿದೆ.ಇಲ್ಲಿ ಚುನಾವಣೆಗಳು,ಮತದಾರರ ಜಾಗೃತಿಗೆ ಸಂಬಂಧಿಸಿದ ಸಾಕ್ಷ್ಯಚಿತ್ರಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ವೇಟಿಂಗ್‌ ರೂಂ ಹಾಗೂ ಮತ ದಾನ ಕೇಂದ್ರದ ಕೊಠಡಿಯವರೆಗೆ ಚುನಾವಣೆ ಮತ್ತು ಮತದಾರರ ಜಾಗೃತಿಗೆ ಸಂಬಂಧಿಸಿದ ವಿಶೇಷ ಪೋಸ್ಟರ್‌ ಗಳನ್ನು ಅಳವಡಿಸಲಾಗಿದೆ.

ಕೇಂದ್ರ ಚುನಾವಣ ಆಯೋಗದ ಮಾರ್ಗದರ್ಶನದಂತೆ ರಾಷ್ಟ್ರಪತಿ ಚುನಾವಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗಿದ್ದು ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತ ದಾನ ನಡೆಯಲಿದೆ.ಗೌಪ್ಯ ಮತದಾನ ಆಗಿರುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಹೇಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.