ಬೆಂಗಳೂರು –
ಆಟಿಕೆ ಚೆಂಡಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ತಗೆದುಕೊಂಡು ಬಂದಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹೌದು ಬೆಂಗಳೂರಿನ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, 11 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಇಂಡಿಗೊ ವಿಮಾನದಲ್ಲಿ ಆಟಿಕೆ ಚೆಂಡು ಪತ್ತೆಯಾಗಿತ್ತು. ಇದನ್ನು ಪರಿಶೀಲನೆ ನಡೆಸಿದಾಗ 11 ಲಕ್ಷ ರೂ. ಮೌಲ್ಯದ ಚಿನ್ನ ಬೆಳಕಿಗೆ ಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
