ಬೆಂಗಳೂರು –
ಎರಡು ವರ್ಷಗಳ ನಂತರ ಕೊನೆಗೂ ರಾಜ್ಯ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಪ್ರಾಥಮಿಕ ಶಾಲೆಯಿಂದ ಎಲ್ಲಾ ತರಗತಿ ಗಳನ್ನು ಆರಂಭ ಮಾಡುತ್ತಿದೆ.ಹೌದು ಅಕ್ಟೋಬರ್ 25 ರಿಂದ ರಾಜ್ಯದಲ್ಲಿ ಪ್ರಾಥಮಿಕ ಹಂತದ ತರಗತಿ ಗಳು ಆರಂಭವಾಗಲಿದ್ದು ಇನ್ನೂ ಇದರ ನಡುವೆ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಕೊರೋನಾ ಲಸಿಕೆಯನ್ನು ಶಾಲೆಗಳ ಲ್ಲಿಯೇ ನೀಡಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆಗಳ ಆರಂಭ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಿ ಆದೇಶವನ್ನು ಮಾಡಲಾಗಿದೆ ಹಾಗೆಯೇ ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು
ರಾಜ್ಯದಲ್ಲಿ ಎಲ್ಲಾ ಶಾಲೆಗಳು ಆರಂಭಗೊಂಡ ನಂತ್ರ ಮಧ್ಯಾಹ್ನದ ಬಿಸಿಯೂಟದ ಯೋಜನೆ ಕೂಡ ಪುನರಾರಂಭಿಸಲಾಗುತ್ತದೆ.ಶಾಲೆ ಆರಂಭದ ವೇಳೆಗೆ ಮಕ್ಕಳಿಗೆ ಕೊರೋನಾ ಲಸಿಕೆ ( Covid19 Vaccine ) ದೊರೆತರೇ ಶಾಲೆಗಳಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎನ್ನುತ್ತಾ ಈ ಮೂಲಕ ಶಾಲಾ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದರು.