ಬೆಂಗಳೂರು –
ಅಂಗನವಾಡಿ ಕಾರ್ಯಕರ್ತೆ ಸೇವೆಯಲ್ಲಿರುವಾಗ ಮರಣ ಹೊಂದಿ ದರೆ ಅನುಕಂಪದ ಆಧಾರದಲ್ಲಿ ಷರತ್ತುಗಳಿಗೆ ಒಳಪಟ್ಟು ಮಗಳು ಅಥವಾ ಸೊಸೆಯನ್ನು ಆ ಹುದ್ದೆಗೆ ನೇಮಿಸುವುದು ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಸರಕಾರ ಒಪ್ಪಿಕೊಂಡಿದ್ದು ಪರಿಣಾಮ ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆದುಕೊಂಡರು.

ರಾಜ್ಯ ಅಂಗನವಾಡಿ ನೌಕಕರರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಮಾತನಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಕಲ್ಯಾಣ ಇಲಾಖೆ ಸಚಿವರು ಮಧ್ಯ ಪ್ರವೇಶಿಸಿ ಅನುಕಂಪದ ಆಧಾರದ ಮೇಲೆ ಮಗಳು ಮತ್ತು ಸೊಸೆಗೆ ಆ ಕೆಲಸ ನೀಡುವುದು ಸಹಿತ ಕೆಲವು ಬೇಡಿಕೆಗಳ ಈಡೇರಿ ಕೆಗೆ ಸಹಮತ ವ್ಯಕ್ತಪಡಿಸಿ ಸುತ್ತೋಲೆ ಹೊರಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಹೋರಾಟ ಹಿಂಪಡೆಯಲಾಗಿದೆ ಎಂದರು. ಇನ್ನೂ ಜೊತೆಗೆ ಕೋಳಿ ಮೊಟ್ಟೆ ಹಣವನ್ನು ಮುಂಗಡ ವಾಗಿ ನೀಡಲು ಕೂಡ ಒಪ್ಪಿಕೊಂಡಿದ್ದಾರೆ. ಅಂಗನವಾಡಿ ಸಹಾಯಕಿಯರಿಗೆ ಮತ್ತು ಮಿನಿ ಕಾರ್ಯಕರ್ತೆಯರಿಗೆ ಸೇವಾ ಜ್ಯೇಷ್ಠತೆಯನ್ನು ಸಮಪ್ರಮಾಣದಲ್ಲಿ ನೀಡಲು ಶಿಫಾರಸು ಮಾಡು ವುದಾಗಿಯೂ ಭರವಸೆ ನೀಡಿದ್ದಾರೆ ಎಂದರು.ಎಲ್‌ಕೆಜಿ, ಯುಕೆಜಿ ಆರಂಭಿಸಲಿ ಅಂಗನವಾಡಿ ಕೇಂದ್ರದಲ್ಲೆ ತರೆಯಬೇಕು ಸರಕಾರವೇ ಎಲ್‌ಕೆಜಿ,ಯುಕೆಜಿ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ನೀಡುವುದು ಸಹಿತ ವಿವಿಧ ಬೇಡಿಕೆ ಈಡೇರಿಕೆ ಸಂಬಂಧ ಶೀಘ್ರದಲ್ಲೇ ಅಧಿಕಾರಿ ಗಳ ಜಂಟಿ ಸಭೆ ನಡೆಯಲಿದೆ ಎಂದು ವರಲಕ್ಷ್ಮೀ ಹೇಳಿದರು.