ಬೆಂಗಳೂರು –
ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ,ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕದ ಸರ್ಕಾರಿ ಮತ್ತು ಅನುದಾನಿತ ಶಾಲೆ ಗಳ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲು ಸರ್ಕಾರ ನಿರ್ಧರಿಸಿದ್ದು ಬಿಸಿಯೂಟದೊಂದಿಗೆ ಮೊಟ್ಟೆ,ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲಾಗುವುದು.ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಪೂರಕ ಪೌಷ್ಟಿಕ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತದೆ.
ಕಲ್ಯಾಣ ಕರ್ನಾಟಕದ ಬೀದರ್,ರಾಯಚೂರು,ಕಲ್ಬುರ್ಗಿ, ಯಾದಗಿರಿ,ಕೊಪ್ಪಳ,ಬಳ್ಳಾರಿ,ವಿಜಯನಗರ,ವಿಜಯಪುರ ಸೇರಿದಂತೆ 8 ಜಿಲ್ಲೆಗಳ ಶಾಲಾ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ.ಜೂನ್ 1ರಿಂದ ಸೆಪ್ಟೆಂಬರ್ 11ರ ವರೆಗೆ ಹಾಗೂ ಅಕ್ಟೋಬರ್ ನಿಂದ ಫೆಬ್ರವರಿವರೆಗೆ ಪೌಷ್ಟಿಕ ಆಹಾರ ನೀಡ ಲಾಗುತ್ತದೆ ಇದರೊಂದಿಗೆ ಮತ್ತೊಂದು ಕೆಲಸ ಕಾರ್ಯ ಸರ್ಕಾರಿ ಶಾಲಾ ಶಿಕ್ಷಕರಿಗೆ ಆರಂಭವಾಗಲಿದೆ.