ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಯಾಗೋದು ಕಡ್ಡಾಯವಾಗಿದೆ.ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗ ಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ 22-03- 2022ರೊಳಗೆ ತೆಗೆದುಕೊಂಡು ಉತ್ತೀರ್ಣರಾಗಬೇಕಾಗಿ ರುತ್ತದೆ. ಸದರಿ ದಿನಾಂಕದ ನಂತ್ರ CLT ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿ ಸೌಲಭ್ಯವನ್ನು ಪಡೆಯಲು ಅನರ್ಹರಾಗಿರುತ್ತಾರೆ.ಈ ಹಿನ್ನಲೆಯಲ್ಲಿ ಪ್ರಸ್ತುತ ಇರುವ ಪರೀಕ್ಷಾ ಕೇಂದ್ರಗಳ ಜೊತೆಗೆ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೆಚ್ಚುವರಿಯಾಗಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸು ವಂತೆ ಸರ್ಕಾರಕ್ಕೆ ನೌಕರರ ಸಂಘವು ಮನವಿ ಮಾಡಿತ್ತು. ಈ ಮನವಿ ಪರಿಗಣಿಸಿರುವಂತ ಇ-ಆಡಳಿತ ಇಲಾಖೆಯು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿ ಯಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ಅನುಮತಿ ನೀಡಿದ್ದು ಇದರಿಂದಾಗಿ ನೌಕರರಿಗೆ ಅನುಕೂಲವಾಗಲಿದೆ.