ತುಮಕೂರು –
ಬಿಸಿಯೂಟ ಸೇವಿಸಿ ಶಿಕ್ಷಕರು ಸೇರಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಯಲ್ಲಿ ಶಿಕ್ಷಕರು,ವಿದ್ಯಾರ್ಥಿಗಳಿಗೆ ಚಿಕಿತ್ಸೆ BEO ಭೇಟಿ ಆರೋಗ್ಯ ವಿಚಾರಣೆ ಹೌದು
ಶಾಲೆಯಲ್ಲಿ ಬಿಸಿಯೂಟವನ್ನು ಸೇವಿಸಿ ಶಿಕ್ಷಕರು ವಿದ್ಯಾರ್ಥಿಗಳು ಆಸ್ವಸ್ಥಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಹೌದು ಊಟ ಮಾಡಿದ ನಂತರ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಕೂಡಾ ಅಸ್ವಸ್ಥಗೊಂಡಿದ್ದಾರೆ.ಇಬ್ಬರು ಶಿಕ್ಷಕರು ಸೇರಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ದಲ್ಲಿ ಏರುಪೇರಾಗಿದೆ.
ಸೀನಪ್ಪನಹಳ್ಳಿ ಗ್ರಾಮದ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸೀನಪ್ಪನಹಳ್ಳಿನಲ್ಲಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಈ ಒಂದು ಚಿತ್ರಣ ಕಂಡು ಬಂದಿದ್ದು ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಮೊಸರನ್ನ ಸೇರಿಸಿದ್ದರು ವಿದ್ಯಾರ್ಥಿ ಗಳು
ನಿನ್ನೆ ರಾತ್ರಿ ವಿದ್ಯಾರ್ಥಿಗಳು ಮನೆಗೆ ಹೋದಾಗ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ರಾತ್ರೋರಾತ್ರಿ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ ಪೋಷಕರು.ಕುಣಿಗಲ್ ತಾಲ್ಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಸ್ವಸ್ಥಗೊಂಡಿರುವ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಅದರಲ್ಲಿ 12 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಒಟ್ಟು 80 ವಿದ್ಯಾರ್ಥಿಗಳಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆ ಯಲ್ಲಿ ಈ ಒಂದು ಅವಘಡ ನಡೆದಿದೆ.ಸ್ಥಳಕ್ಕೆ ಕುಣಿಗಲ್ ಟಿಹೆಚ್ ಓ ಹಾಗೂ ಆರೋಗ್ಯಾಧಿಕಾ ರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಹಲವರು ಭೇಟಿ ನೀಡಿ ಆರೋಗ್ಯ ವನ್ನು ವಿಚಾರಣೆ ಮಾಡಿದರು.
ಸಧ್ಯ ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳು ಶಿಕ್ಷಕರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು ಗಂಭೀರಗೊಂಡಿರುವ 10 ವಿದ್ಯಾರ್ಥಿಗಳಿಗೆ ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಸುದ್ದಿ ಸಂತೆ ನ್ಯೂಸ್ ತುಮಕೂರು…..