ಬೆಂಗಳೂರು
ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಗೆ ನಿಗದಿಪಡಿಸಿ ಹೊರಡಿಸಲಾಗಿದ್ದ ಆದೇಶವನ್ನು ಹೈಕೊರ್ಟ್ ರದ್ದು ಮಾಡಿದೆ. ಕಳೆದ ಅಕ್ಟೋಬರ್ 8ರಂದು ಸರ್ಕಾರ ಮೀಸಲಾತಿ ನಿಗದಿ ಮಾಡಿ ಆದೇಶವನ್ನು ಹೊರಡಿಸಿತ್ತು ಈ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಬಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠ ಇಂದು ತೀರ್ಪು ನೀಡಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲ ಅವಕಾಶವನ್ನು ನೀಡಿದೆ.ಈ ಹಿಂದೆ ಅಕ್ಟೋಬರ್ 8ರಂದು ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಆದೇಶವನ್ನು ಇಂದು ಹೈಕೋರ್ಟ್ ರದ್ದು ಮಾಡಿದೆ.ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿತ್ತು.ಅದರಂತೆ ಬಹಳಷ್ಟು ಕಡೆ ಚುನಾವಣೆ ನಡೆದು ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ.ಆದರೆ ಈ ಆದೇಶದಿಂದ ಈ ಚುನಾವಣಾ ಫಲಿತಾಂಶಗಳು ಅಮಾನತು ಸ್ಥಿತಿಯಲ್ಲಿರುತ್ತದೆ.ಮೇಲ್ಮನವಿಗೆ ಅವಕಾಶ: ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ಅವಕಾಶ ಕೋರಿದೆ. ಹೀಗಾಗಿ ಕೋರ್ಟ್ ಮೇಲ್ಮನವಿ ಸಲ್ಲಿಸಲು ಇಂದಿನಿಂದ ಹತ್ತು ದಿನಗಳ ಕಾಲ ಅವಕಾಶ ನೀಡಿದೆ. ಮೇಲ್ಮನವಿ ಸಲ್ಲಿಸಿದರೆ ಆಗ ಹೈಕೋರ್ಟ್ ನ ವಿಭಾಗೀಯ ಪೀಠ ನೀಡುವ ತೀರ್ಪು ಅಂತಿಮವಾಗಿರಲಿದೆ ಎಂದು ಕೋರ್ಟ್ ಸೂಚಿಸಿದೆ.ಸಧ್ಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿಯನ್ನು ರದ್ದು ಮಾಡಿದ್ದು, ಹೊಸ ಮೀಸಲಾತಿ ಅಧಿಸೂಚನೆಗೆ ಹೈಕೋರ್ಟ್ ಆದೇಶಿಸಿದೆ. 4 ವಾರದಲ್ಲಿ ಮೀಸಲಾತಿ ನಿಗದಿ ಮಾಡುವಂತೆ ಸೂಚಿಸಿದೆ. ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕಸದಸ್ಯ ಪೀಠ ತೀರ್ಪು ನೀಡಿದೆ ಎನ್ನಲಾಗಿದೆ. ಇನ್ನೂ ರಾಜ್ಯ ಸರ್ಕಾರದ ಮೀಸಲಾತಿ ಪ್ರಶ್ನಿಸಿ ಕೆಲವರು ಹೈಕೊರ್ಟ್ ಮೆಟ್ಟಿಲೆರಿದ್ದರು ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳು ಸಧ್ಯ ಈ ಒಂದು ಆದೇಶವನ್ನು ಮಾಡಿದ್ದು ಇವೆಲ್ಲದರ ನಡುವೆ ಈಗಾಗಲೇ ಹಲವೆಡೆ ಚುನಾವಣೆ ನಡೆದು ಫಲಿತಾಂಶ ಕೂಡಾ ಬಂದಿದ್ದು ಅಧ್ಯಕ್ಷ ಉಪಾಧ್ಯಕ್ಷರಾಗಿದ್ದು ಅವರ ಪರಸ್ಥಿತಿ ಏನು ರಾಜ್ಯ ಸರ್ಕಾರ ಮುಂದೆ ಏನು ಮಾಡಲಿದೆ ಮೇಲ್ಮನವಿ ಸಲ್ಲಿಸಿದ ನಂತರ ನ್ಯಾಯಾಲಯದ ತೀರ್ಪು ಮತ್ತೇ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.