ಬೆಂಗಳೂರು –
ವೇತನ,ಪಿಂಚಣಿ ಸೌಲಭ್ಯದ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗಳಿಗೆ ರಾಜ್ಯದ ಹೈಕೊರ್ಟ್ ಬಿಗ್ ಶಾಕ್ ನೀಡಿದೆ ಹೌದು ಕನಿಷ್ಠ ವೇತನ ಕಾಯ್ದೆಯಡಿ ಬರಲ್ಲ ಎಂಬ ಅಂಶ ಗಳನ್ನು ಉಲ್ಲೇಖವನ್ನು ಮಾಡಿರುವ ಹೈಕೋರ್ಟ್ ಈ ಒಂದು ಆದೇಶವನ್ನು ಮಾಡಿದೆ.
ಹೌದು ಕನಿಷ್ಠ ವೇತನ ನಿರೀಕ್ಷೆಯಲ್ಲಿದ್ದ ರಾಜ್ಯದ ಬಿಸಿ ಯೂಟ ಸಿಬ್ಬಂದಿಗೆ ರಾಜ್ಯ ಹೈಕೊರ್ಟ್ ಶಾಕ್ ನೀಡಿದೆ. ಕನಿಷ್ಠ ವೇತನ ಕಾಯ್ದೆಯಡಿ ಬಿಸಿಯೂಟ ಸಿಬ್ಬಂದಿ ಬರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸಮಾಡುವ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.
ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾರಕರು ಹಾಗೂ ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆ ಯಡಿ ವೇತನ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ.ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗಿಯ ನ್ಯಾಯಪೀಠ ಈ ಆದೇಶ ನೀಡಿದೆ. ಕನಿಷ್ಠ ವೇತನದ ಕಾಯ್ದೆಯಲ್ಲಿ ಉಲ್ಲೇಖಿಸಲಾದ ಅಧಿಸೂಚಿತ ಉದ್ಯೋಗಗಳಿಗೆ ಮಾತ್ರ ಕಾಯ್ದೆಯ ನಿಯಮಗಳು ಅನ್ವಯವಾಗುತ್ತವೆ. ಕರ್ನಾಟಕ ಕನಿಷ್ಠ ವೇತನ ಕಾಯ್ದೆಗಳ ನಿಯಮದ ಪ್ರಕಾರ, ಕೆಲಸದ ಅವಧಿ 9 ಗಂಟೆ ಆಗಿರ ಬೇಕು.ದಿನಕ್ಕೆ ಕೇವಲ 4 ಗಂಟೆಯಷ್ಟು ಸೀಮಿತ ಅವಧಿಗೆ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಬಿಸಿಯೂಟ ಸಿಬ್ಬಂದಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಹೇಳಿದ್ದು ಸಧ್ಯ ಒಂದು ಕಡೆಗೆ ಹೋರಾಟ ನಡೆಯುತ್ತಿದ್ದು ಇದರ ನಡುವೆ ಹೈಕೊರ್ಟ್ ಆದೇಶ ಮತ್ತಷ್ಟು ಆತಂಕವನ್ನುಂಟುಮಾಡಿದ್ದು ಬಿಸಿಯೂಟ ಕಾರ್ಯಕರ್ತೆಯರು ಮುಂದೇನು ಮಾಡು ತ್ತಾರೆ ಎಂಬೊದನ್ನು ಕಾದು ನೋಡಬೇಕಿದೆ.