ಧಾರವಾಡ –
ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ – ಕುಣಿದು ಕುಪ್ಪಳಿಸಿದ ಪಾಲಿಕೆಯ ಸದಸ್ಯರಿಗೆ ಸಾಥ್ ನೀಡಿದ ಪಾಲಿಕೆಯ ಅಧಿಕಾರಿಗಳು…..
ಕನ್ನಡ ರಾಜ್ಯೋತ್ಸವವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅರ್ಥಪೂರ್ಣವಾಗಿ ಆಚರಣೆ ಮಾಡಿತು ಹೌದು ರಾಜ್ಯದಲ್ಲಿಯೇ ಎರಡನೇಯ ದೊಡ್ಡ ಮಹಾನಗರ ಪಾಲಿಕೆ ಎಂದೇ ಕರೆಯುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಕನ್ನಡ ರಾಜ್ಯೋತ್ಸವ ವನ್ನು ಹಮ್ಮಿ ಕೊಳ್ಳಲಾಗಿತ್ತು ಧಾರವಾಡದ ಮಲ್ಲಿಕಾರ್ಜುನ ಮನ್ಸೂರ್ ಕಲಾಭವನ ಆವರಣದಲ್ಲಿ ಹಮ್ಮಿಕೊಂಡಿದ್ದ ಈ ಒಂದು ಕಾರ್ಯಕ್ರಮಕ್ಕೆ ಪಾಲಿಕೆಯ ಮೇಯರ್ ಆಯುಕ್ತರು ಸದಸ್ಯರು ಸೇರಿದಂತೆ ಹಲವರು ಚಾಲನೆಯನ್ನು ನೀಡಿದರು.
ಇದೇ ವೇಳೆ ವೇದಿಕೆಯ ಮೇಲೆ ವಿಶೇಷವಾಗಿ ಕಂಡು ಬಂದಿದ್ದು ಕನ್ನಡ ನಾಡು ನುಡಿ ಕುರಿತಾದ ಹಾಡುಗಳಿಗೆ ಪಾಲಿಕೆಯ ಆಯುಕ್ತರು,ಮೇಯರ್ ,ಸದಸ್ಯರು ಅಧಿಕಾರಿಗಳೊಂದಿಗೆ ಡ್ಯಾನ್ಸ್ ಮಾಡಿದರು.ಕಲಾಭವದ ಆವರಣದಲ್ಲಿನ ವೇದಿಕೆಯ ಮೇಲೆ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡಿಗೆ ಹೆಜ್ಜೆ ಹಾಕುತ್ತಾ ಹತ್ತಾರು ಹಾಡುಗಳಿಗೆ ಸಖತ್ ಡ್ಯಾನ್ಸ್ ಮಾಡಿದರು.ಈ ಮೂಲಕ ಪಾಲಿಕೆಯವರು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದು ಕಂಡು ಬಂದಿತು.
ಈ ಒಂದು ಸಂದರ್ಭದಲ್ಲಿ ಪಾಲಿಕೆಯ ಮೇಯರ್ ರಾಮಣ್ಣ ಬಡಿಗೇರ,ಉಪಮೇಯರ್ ದುರ್ಗಮ್ಮ ಬಿಜವಾಡ,ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ,ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ರಾಜು ಕಮತಿ,ಸದಸ್ಯರಾದ ಸಂತೋಷ ಚೌಹಾನ್, ಅಧಿಕಾರಿಗಳಾದ ಅರವಿಂದ ಜಮಖಂಡಿ,ಸೇರಿದಂತೆ ಹಲವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..