ಸರ್ಕಾರಿ ಅಧಿಕಾರಿ ಹತ್ಯೆ ಆತಂಕ ಮೂಡಿಸಿದ ಘಟನೆ – ಇವರಿಗೆ ಹೀಗೆ ಆದರೆ ಇನ್ನೂ ಜನ ಸಾಮಾನ್ಯರ ಪಾಡೇನು…..

Suddi Sante Desk
ಸರ್ಕಾರಿ ಅಧಿಕಾರಿ ಹತ್ಯೆ ಆತಂಕ ಮೂಡಿಸಿದ ಘಟನೆ – ಇವರಿಗೆ ಹೀಗೆ ಆದರೆ ಇನ್ನೂ ಜನ ಸಾಮಾನ್ಯರ ಪಾಡೇನು…..

ಬೆಂಗಳೂರು

ಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು – ಮಾಜಿ ಡ್ರೈವರ್ ನನ್ನು ಈ ಒಂದು ಕೊಲೆ ವಿಚಾರ ದಲ್ಲಿ ಬಂಧನ ಮಾಡಲಾಗಿದ್ದು ತನಿಖೆಯ ವೇಳೆ ಮಹತ್ವದ ಅಂಶಗಳು ಬಯಲಾಗಿವೆ.

ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಣಿ-ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಪ್ರತಿಮಾ ಕೆಎಸ್‌ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಿರಣ್ ಬಂಧಿತ ಆರೋಪಿಯಾಗಿದ್ದು ಈತ ಈ ಮೊದಲು ಪ್ರತಿಮಾ ಕೆಎಸ್‌ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ.

ಈತನನ್ನು 10ದಿನಗಳ ಮೊದಲು ಕೆಲಸದಿಂದ ತೆಗೆದು ಹಾಕಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಹೇಳಿದ್ದಾರೆ.ಕಿರಣ್‌ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ. ಆತನಿಗೆ ಪ್ರತಿಮಾ ಅವರು ಕೆಲಸದಿಂದ ತೆಗೆದು ಹಾಕಿದ್ದರು. ಇದರಿಂದಾಗಿ ಆಕೆಯನ್ನು ಕೊಂದಿದ್ದಾನೆ ಎಂದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ.

ಈತ ಪ್ರತಿಮಾ ಅವರನ್ನು ಕೊಲೆ ಮಾಡಿದ ಬಳಿಕ ಬೆಂಗಳೂರಿನಿಂದ 200ಕಿ.ಮೀ ದೂರದಲ್ಲಿರುವ ಚಾಮರಾಜನಗರಕ್ಕೆ ಪರಾರಿಯಾಗಿದ್ದಾನೆ. ಅಲ್ಲಿಂದ ಪೊಲೀಸರು ಈತನಿಗೆ ಬಂಧಿಸಿದ್ದಾರೆ.
ಪ್ರತಿಮಾ ಅವರ ದೇಹವು ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಭಾನುವಾರ ಬೆಳಿಗ್ಗೆ 8.30ರ ಸುಮಾರಿಗೆ ಆಕೆಯ ಸಹೋದರ ಪೊಲೀ ಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕ ವಿಚಾರಣೆಯ ಪ್ರಕಾರ ಅವರು ಶನಿವಾರ ಸಂಜೆ 6 ಗಂಟೆಯವರೆಗೆ ಕಚೇರಿಯಲ್ಲಿದ್ದರು.

ನಂತರ ಕಿರಣ್ ಬದಲಿಗೆ ನೇಮಕಗೊಂಡ ಚಾಲಕ ಅವರನ್ನು ಮನೆಗೆ ಬಿಟ್ಟು ಬಂದಿದ್ದರು.ಪ್ರತಿಮಾ ಅವರು ದೊಡ್ಡಕಲ್ಲಸಂದ್ರದ ಅಪಾರ್ಟ್ಮೆಂಟ್‌ ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು.ಇವರು ವಿವಾಹಿತರಾಗಿದ್ದು ಪ್ರತಿಮಾ ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ರಾತ್ರಿ ಪ್ರತಿಮಾ ಅವರಿಗೆ ಸಹೋದರ ಕರೆ ಮಾಡಿದ್ದ ಆದರೆ ಕರೆ ಸ್ವೀಕರಿಸಿರಲಿಲ್ಲ.

ಬೆಳಿಗ್ಗೆ ಮನೆ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.2017ರಲ್ಲಿ ರಾಮನಗರದಲ್ಲಿ 3 ವರ್ಷ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಪ್ರತಿಮಾ ಅವರು ಬಳಿಕ ಬೆಂಗ ಳೂರಿಗೆ ವರ್ಗಾವಣೆಯಾಗಿದ್ದರು. ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸು ತ್ತಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.