ಬೆಂಗಳೂರು –
ಮೇ 16 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಹೌದು ವಿದ್ಯಾರ್ಥಿಗಳ ಕಲಿಕಾ ಕೊರತೆ ನೀಗಿಸಲು ಆರಂಭಿಸಿರುವ ‘ಕಲಿಕಾ ಚೇತರಿಕೆ’ ಕಾರ್ಯಕ್ರ ಮಕ್ಕೆ ಚಾಲನೆ ನೀಡಲಿದ್ದಾರೆ.ಆದರೆ ವಿವಿಧ ಕಾರಣಗಳಿಂ ದಾಗಿ ಈ ಬಾರಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ತಲುಪುವು ದು ವಿಳಂಬವಾಗಲಿದ್ದು ಶಿಕ್ಷಕರು ಇದನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ
ಇನ್ನೂ ಈ ಬಾರಿ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನು ಆರಂಭಿಸುವುದು ವಿಳಂಬ ವಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ನಿಗದಿಯಂತೆ ಮೇ 16 ರಂದು ರಾಜ್ಯಾದ್ಯಂತ ಶಾಲೆಗಳು ಆರಂಭವಾಗುತ್ತಿದ್ದು ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆಯುತ್ತಿವೆ.ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಶಾಲಾ-ಕಾಲೇಜುಗಳು ನಿಗದಿತವಾಗಿ ನಡೆಯದ್ದರ ಮಧ್ಯೆ ಇದೀಗ ಮೇ 16ರಿಂದ ಪೂರ್ಣಪ್ರಮಾಣದಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿ ಗಳಿಗೆ ಶಾಲೆಗಳು ಆರಂಭವಾಗುತ್ತಿದ್ದು ಹೀಗಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಉತ್ಸಾಹ ಮನೆಮಾಡಿದೆ ಬಹಳಷ್ಟು ಶಾಲೆಗಳಲ್ಲಿ ಶಿಕ್ಷಕರು ಅಂದು ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ತಯಾರಿ ನಡೆದಿದೆ.