ಬೆಂಗಳೂರು –
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ಯಲ್ಲಿ ಮಂಗಳವಾರ ಬೆಂಗಳೂರಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಟಾಸ್ಕ್ ಫೋರ್ಸ್ ಸಭೆ ನಡೆಯಿತು.
ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಅನುಸರಿಸಬೇಕಾದ ಬೋಧನಾ ಕ್ರಮಗಳ ಕುರಿತು ಚರ್ಚೆ ನಡೆಯಿತು.ಸಭೆಯಲ್ಲಿ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್,ವಿಧಾನ ಪರಿಷತ್ ಸದಸ್ಯ ಅರುಣ ಶಾಹಪೂರ, ರಾಜ್ಯ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಟಾಸ್ಕ್ ಫೋರ್ಸ್ ಅಧ್ಯಕ್ಷ ಮದನ ಗೋಪಾಲ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ಇತರರು ಭಾಗವಹಿಸಿದ್ದರು.