ನವದೆಹಲಿ –
ಕರ್ನಾಟಕದ ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ್ತು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದೆ. ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಕುರಿತಾಗಿ ಇಂದು ಚರ್ಚೆ ನಡೆಸಲಾಗುವುದು. ಕೇಂದ್ರ ಚುನಾವಣಾ ಆಯೋಗದ ಸಭೆಯಲ್ಲಿ ಮಿನಿ ಮಹಾಸಮರ ಎಂದೇ ಹೇಳಲಾಗುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣೆ ತಯಾರಿ ಆರಂಭಿಸಿದ್ದು, ಮೊದಲ ಸುತ್ತಿನ ಪ್ರಚಾರ ಆರಂಭಿಸಿವೆ. ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಅಧಿಕಾರಕ್ಕೇರಲು ಬಿಜೆಪಿ ಪೂರ್ವ ತಯಾರಿ ಆರಂಭಿಸಿದ್ದು ಎಲ್ಲಾ ಪ್ರಶ್ನೆಗಳಿಗೆ ಇಂದಿನ ಸಭೆಯಲ್ಲಿ ಉತ್ತರ ಸಿಗಲಿದೆ.