ಧಾರವಾಡದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಕುಂದು ಕೊರತೆ ಸಭೆ – ಅಕ್ಟೋಬರ್ 22 ರಂದು ಎಸ್ ಪಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ…..

Suddi Sante Desk
ಧಾರವಾಡದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಕುಂದು ಕೊರತೆ ಸಭೆ – ಅಕ್ಟೋಬರ್ 22 ರಂದು ಎಸ್ ಪಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ…..

ಧಾರವಾಡ

ಧಾರವಾಡದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಯಿಂದ ಕುಂದು ಕೊರತೆ ಸಭೆ – ಅಕ್ಟೋಬರ್ 22 ರಂದು ಎಸ್ ಪಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಸ್ ಪಿ ನೇತ್ರತ್ವದಲ್ಲಿ ಕುಂದು ಕೊರತೆ ಸಭೆಯನ್ನು ಅಕ್ಟೋಬರ್ 22 ರಂದು ಹಮ್ಮಿಕೊಳ್ಳಲಾಗಿದೆ.

ಈ ಒಂದು ಸಭೆಯೂ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ನೇತ್ರತ್ವದಲ್ಲಿ ನಡೆಯಲಿದ್ದು ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದು ಎಸ್.ಪಿ. ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಒಂದು ಮಹತ್ವದ ಸಭೆಯಲ್ಲಿ ಪ.ಜಾ, ಪ.ವ. ಗಳ ಕುಂದು ಕೊರತೆಗಳನ್ನು ಆಲಿಸಲಾಗುತ್ತದೆ.ಜಿಲ್ಲಾ ಪೊಲೀಸ್ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕುಂದುಕೊರತೆಗಳ ಜಿಲ್ಲಾ ಮಟ್ಟದ ಸಭೆಯನ್ನು ಅಕ್ಟೋಬರ್ 22, 2023 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದ ಸಭಾಭವನದಲ್ಲಿ ನಿಗದಿಪಡಿಸ ಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮುಖಂಡರು ಈ ಸಭೆಗೆ ಹಾಜರಾಗಬೇಕೆಂದು ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.