ಬೆಂಗಳೂರು –
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ ತೀರ್ಪು ನಿಂದಾಗಿ ಶಿಕ್ಷಣ ನೀತಿಯಲ್ಲಿ ಸಮವಸ್ತ್ರ ಕುರಿತು ಇದ್ದಂತಹ ಗೊಂದಲಗಳನ್ನು ಈ ತೀರ್ಪಿನ ಆಧಾರದ ಮೇಲೆ ಶೀಘ್ರ ದಲ್ಲೇ ತಿದ್ದುಪಡಿ ಮಾಡುವ ಮೂಲಕ ಸರಿಪಡಿಸ ಲಾಗು ವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು ಬೆಂಗಳೂರಿನಲ್ಲಿ ಮಾತನಾಡಿದ ಅವರು ನ್ಯಾಯಾಲಯದ ಈ ಒಂದು ತೀರ್ಪು ನ ಆಧಾರದ ಮೇಲೆ ಕೂಡಲೇ ಹೊಸ ದೊಂದು ತಿದ್ದುಪಡಿ ತಗೆದುಕೊಂಡು ಬಂದು ಎಲ್ಲಾ ಗೊಂದಲ ಗಳಿಗೆ ತೆರೆ ಏಳೆಯುವುದಾಗಿ ಹೇಳಿದರು

ಇನ್ನೂ ಇದೇ ವೇಳೆ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕನ್ನು ಎತ್ತಿ ಹಿಡಿದಿದೆ ಎಂದು ಗೃಹ ಸಚಿವರ ಅರಗ ಜ್ಞಾನೇಂದ್ರ ಹೇಳಿ ದರು.ಹೆಣ್ಣುಮಕ್ಕಳಿಗೆ ಸಿಗಬೇಕಾದ ಶಿಕ್ಷಣವೆಂಬ ಮೂಲ ಭೂತ ಹಕ್ಕನ್ನು ಹಿಜಾಬ್ ವಿವಾದ ಕುರಿತು ಇಂದು ಹೈಕೋರ್ಟ್ ನೀಡಿರುವ ತೀರ್ಪು ಎತ್ತಿಹಿಡಿದಿದೆ.ಐತಿಹಾಸಿಕ ತೀರ್ಮಾನವನ್ನು ಹೈಕೋರ್ಟ್ ನೀಡಿದೆ. ಸರ್ಕಾರ ರೂಪಿಸಿದ ನಿಯಮದ ಪರವಾಗಿ ತೀರ್ಪು ಬಂದಿದೆ. ಹೆಣ್ಣ ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದರು.


ನಮಗೆ ಈ ತೀರ್ಪು ಸಂತೋಷ ಕೊಟ್ಟಿದೆ.ನ್ಯಾಯಾಲಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.ಈ ತೀರ್ಪನ್ನು ದೇಶ, ವಿದೇಶ ಗಳು ಗಮನಿಸುತ್ತಿದ್ದವು.ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ಧರ್ಮದ ಮತಾಂಧತೆ ಬೆಳೆಸಿಕೊಳ್ಳದೆ ಶಾಲೆ ಗಳಲ್ಲಿ ನಾವು ಅಣ್ಣ ತಮ್ಮಂದಿರು ಅಕ್ಕ ತಂಗಿಯರು ಹಾಗೂ ವಿಶೇಷವಾಗಿ ಭಾರತ ಮಾತೆಯ ಮಕ್ಕಳು ಎಂದು ಸಂಸ್ಕಾರದಿಂದರಬೇಕು ಎಂದು ಹೇಳಿದ್ದಾರೆ.