ಬೆಂಗಳೂರು –
ಶಾಲೆಗಳಿಗೆ ಬೇಸಿಗೆ ರಜೆ ವಿಸ್ತರಣೆ ಮಾಡುವ ಸಾಧ್ಯತೆ ಎನ್ನುವ ಸುದ್ದಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು ಎಲ್ಲಾ ಗೊಂದಲಗಿಳಿಗೆ ತೆರೆ ಎಳೆದಿದೆ.ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾತನಾಡಿ ನಿಗದಿಯಂತೆ ಮೇ 16ರಂದು ಶಾಲೆಗಳು ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದರು.ನಿಗದಿತ ದಿನಾಂಕದಂದೇ ಶಾಲೆ ಆರಂಭವಾಗಲಿದ್ದು ಕಳೆದ ಎರಡು ವರ್ಷಗಳಿಂದ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ 15 ದಿನ ಮೊದಲೇ ಕಲಿಕಾ ಚೇತರಿಕೆ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಬಿಸಿಲ ತಾಪಮಾನ ಹೆಚ್ಚಾಗಿರುವುದರಿಂದ ಜೂನ್ 15ರವರೆಗೆ ರಜೆ ವಿಸ್ತರಿಸಬೇಕು ಎಂದು ಕೆಲವು ವಿಧಾನಪರಿಷತ್ ಸದಸ್ಯರು ಪತ್ರ ಬರೆದಿದ್ದರು.ಇದಕ್ಕೆ ಶಾಲಾ ಸಿಬ್ಬಂದಿ ಮತ್ತು ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿ ಸಿದ್ದರು.ಈಗ ಶಿಕ್ಷಣ ಸಚಿವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ
ಕೋವಿಡ್‍ನಿಂದಾಗಿ ಕಳೆದ ಎರಡೂವರೆ ವರ್ಷಗಳಿಂದ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಹೀಗಾಗಿ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿ ಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.ಹೀಗಾಗಿ ಅಂದಿನಿಂದ ಲೇ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗಿದೆ.ಎರಡು ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳ ಕೌಶಲ್ಯವನ್ನೇ ಕಸಿದುಕೊಂಡಿದೆ.ಇದರಿಂದಾಗಿ ಕಲಿಕಾ ಚೇತರಿಕೆಯ ಕಾರ್ಯಕ್ರಮದ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಯ ಕೊಠಡಿಗಳಿಗೆ ಬರುವಂತೆ ಮಾಡುವುದು ಹಾಗೂ ಮಕ್ಕಳ ಕಲಿಕೆಯ ನ್ಯೂನ್ಯತೆಯನ್ನು ಪತ್ತೆ ಮಾಡಿ ಉತ್ತಮ ಶಿಕ್ಷಣ ನೀಡಬೇಕಾಗಿದೆ. ಹೀಗಾಗಿ ಮೇ 16ರಿಂದ ಶಾಲೆಗಳು ಪ್ರಾರಂಭವಾಗಲಿದೆ ಎಂದರು.ಮಕ್ಕಳ ಕಲಿಕಾ ಹಂತವನ್ನು ಸರಿದೂಗಿಸಲು,ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವರ್ಷದ ಪ್ರಕ್ರಿಯೆ ಸುಗಮವಾಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಉಪಯೋಗಕಾರಿಯಾಗಲಿದೆ ಎಂಬುದು ಶಿಕ್ಷಣ ಇಲಾಖೆಯ ಅಭಿಪ್ರಾಯವಾಗಿದೆ ಎಂದರು.