ಬೆಂಗಳೂರು –
ಶಿಕ್ಷಕರ ವರ್ಗಾವಣೆಯ ವಿಚಾರದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಸ್ ಗರಂ ಆಗಿದ್ದು ಕಂಡು ಬಂದಿತು. ರಾಜ್ಯದಲ್ಲಿನ ಶಿಕ್ಷಕರ ವರ್ಗಾವಣೆಯ ಕುರಿತಂತೆ ಮಾಧ್ಯದವರು ಶಿಕ್ಷಕರ ವರ್ಗಾವಣೆಗೆ ಸರ್ಕಾರ ಕೈಗೊಂಡಿರುವ ಕ್ರಮದಿಂದ ಶಿಕ್ಷಕರು ಪರದಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಆಕ್ರೋಶವನ್ನು ವ್ಯಕ್ತಪಡಿಸಿದರು. ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಲಾ ಗಿತ್ತು.
ಎರಡು ದಿನದಿಂದ ಮತ್ತೆ ಶುರುವಾಗಿದ್ದು ಎಲ್ಲಾ ಶಿಕ್ಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.ಕೆಲ ಶಿಕ್ಷಕರ ವೈಯುಕ್ತಿಕ ಸಮಸ್ಯೆಗಳನ್ನ ಸಾಮೂಹಿಕ ಎಂದು ಬಿಂಬಿಸಲಾಗದು,ಕೆಲ ಶಿಕ್ಷಕರಿಗೆ ಕೆಲಸಕ್ಕೆ ಸೇರುವಾಗ ಜಿಲ್ಲಾವಾರು ಆಯ್ಕೆ ಅಂತ ಗೊತ್ತಿರಲಿಲ್ಲವೇ ಆಗ ರಾಯಚೂರು,ಮತ್ತೊಂದು ಜಿಲ್ಲಾ ದೂರ ಅಂತಾ ಗೊತ್ತಿರಲಿಲ್ವಾ ಎಂದರು.ಎಲ್ಲರ ಸಮಸ್ಯೆನೂ ಅರ್ಥ ಆಗುತ್ತೆ, ಆದರೆ ಶಿಕ್ಷಕರ ಸಮಸ್ಯೆಗಿಂತ ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಿದೆ ಬಳಿಕ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ ಎಂದರು. ಇನ್ನೂ ಶಿಕ್ಷಣ ವ್ಯವಸ್ಥೆಗೆ ಕೋವಿಡ್ ಸವಾಲಾಗಿದ್ದು ಕೇಂದ್ರ,ರಾಜ್ಯ ಸರ್ಕಾರ ಹೆಚ್ಚಿನ ನಿಗಾ ವಹಿಸುತ್ತಿದೆ. ಮೂರನೇ ಅಲೆ ಎಫೆಕ್ಟ್ ಆದ್ರೆ ಶಾಲೆ ನಿಲ್ಲಿಸಬೇಕಾ, ಬೇಡ್ವಾ ಆ ಮೇಲೆ ನಿರ್ಧಾರ ಮಾಡಲಾಗುತ್ತದೆ.ಸದ್ಯಕ್ಕೆ ದೇಶದಲ್ಲಿ ಕೊರೊನಾ ಕ್ಷೀಣಿಸುತ್ತಿದೆ.ಯಾವೂದೇ ತೊಂದರೆ ಇಲ್ಲದೇ ಶಾಲೆ ಪ್ರಾರಂಭ ಆಗಿದೆ ಎಂದರು.