ಬೆಂಗಳೂರು –
SSLC ಹಾಗೂ PUC ಪರೀಕ್ಷೆ ಸಮಯದಲ್ಲಿ ಮೇಲ್ವಿಚಾರಕ ರಾಗಿ ಕೆಲಸ ಮಾಡುವ ಶಿಕ್ಷಕರು ಉಪನ್ಯಾಸಕರು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗುವಂತಿಲ್ಲ ಎಂದು ಶಿಕ್ಷಣ ಇಲಾಖೆ ಮೌಖಿಕ ನಿರ್ದೇಶನ ನೀಡಿದ್ದು ಇದನ್ನು ಪಾಲಿಸುವಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ರಾಜ್ಯದ ಶಿಕ್ಷಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರಿ ನಲ್ಲಿ ಮಾತನಾಡಿದ ಅವರು ಎಸ್‌ಎಸ್‌ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಕರ್ತವ್ಯಕ್ಕೆ ನಿಯೋಜನೆಗೊಂಡ ಉಪನ್ಯಾಸಕರು ಹಿಜಾಬ್ ತೆಗೆದು ಪರೀಕ್ಷಾ ಕೆಲಸಕ್ಕೆ ಹಾಜರಾದರೆ ಮಾತ್ರವೇ ಅವರಿಗೆ ಕೆಲಸಕ್ಕೆ ಅವಕಾಶ ನೀಡಬೇಕು.ಒಂದು ವೇಳೆ ಉಪನ್ಯಾಸಕರು ಹಿಜಾಬ್ ತೆಗೆಯದೇ ಬಂದಲ್ಲಿ ಅವರನ್ನು ಕೆಲಸದಿಂದ ಬಿಡುಗಡೆ ಗೊಳಿಸಲು ಇಲಾಖೆ ನಿರ್ಧರಿಸಿದೆ ಎಂದರು.

ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರಿಗೆ ಸದ್ಯ ಯಾವುದೇ ಡ್ರೆಸ್ ಕೋಡ್ ಅನ್ನು ನೀಡಲಾಗಿಲ್ಲ.ಹೀಗಾಗಿ ಪರೀಕ್ಷಾ ಕೇಂದ್ರ ಗಳಲ್ಲಿ ಗೊಂದಲ ಉಂಟಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದರು.